CRIMENEWSಸಿನಿಪಥ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಗೈರು- ಕೋರ್ಟ್‌ ಅಸಮಾಧಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಇಂದು ವಿಚಾರಣೆ ಗೈರಾಗಿರುವುದಕ್ಕೆ 57ನೇ ಸಿಸಿಎಚ್ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ದರ್ಶನ್‌ ಕೋರ್ಟ್‌ಗೆ ವಿಚಾರಣೆ ಹಾಜರಾಗಬೇಕಿತ್ತು. ಆದರೆ ಗೈರಾಗಿದ್ದಾರೆ. ಹೀಗೆ ವಿಚಾರಣೆಗೆ ಹಾಜರಾಗಿಲ್ಲದಕ್ಕೆ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿದೆ. ಆದ್ದರಿಂದ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲ ಎಂದು ವಿನಾಯಿತಿ ಕೋರಿದರು.

ಈ ವೇಳೆ ನ್ಯಾಯಾಧೀಶರು ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆ ಇದ್ದಾಗ ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಚಾರಣೆ ವೇಳೆ ದರ್ಶನ್‌ ಪರ ವಕೀಲರು, ದರ್ಶನ್‌ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿತು.

ಇನ್ನು ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು. ಇಂದಿನ ವಿಚಾರಣೆಗೆ ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳು ಕೋರ್ಟ್‌ನಲ್ಲಿ ಹಾಜರಾಗಿದ್ದರು. ಸಹೋದರನ ಜತೆ ಪವಿತ್ರಾ ಗೌಡ ಆರ್.ಆರ್. ನಗರದ ಮನೆಯಿಂದ ಬಂದಿದ್ದರು.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಿದ್ದು, ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಇರುವ ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಬಂದಿದ್ದರು.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ ಯೋಜನೆಯಲ್ಲಿ  ಯಾವುದೇ ಗೋಲ್‌ಮಾಲ್ ಆಗಿಲ್ಲ:  ಡೇಟಾ ಸಹಿತ ಮಹಿಳಾ ಇಲಾಖೆ  ಸ್ಪಷ್ಟನೆ  ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಡಿಐಜಿ ಅನುಚೇತ್ ಅಧಿಕಾರ ಸ್ವೀಕಾರ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮೆ ಮಾಡಿಸಲು ಅನ್ನದಾತರಿಗೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಕರೆ ಜೂ.27ರಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಆವತಿಯಿಂದ ಜ್ಯೋತಿ ರಥ ಯಾತ್ರೆ ಆರಂಭ KSRTC- BMTC ನೂತನ ಎಂಡಿಗಳ ಭೇಟಿ ಮಾಡಿದ ಕೂಟದ ಪದಾಧಿಕಾರಿಗಳು: ನೌಕರರ ಬೇಡಿಕೆ ಈಡೇರಿಕೆಗೆ ಸಭೆ ಕರೆಯಲು ಒತ್ತಾಯ ​NWKRTC ಸಂಸ್ಥೆಗೆ ಪ್ರಾಮಾಣಿಕ ಸೇವೆ ಸಲ್ಲಿಸಿ ನೂತನವಾಗಿ ನೇಮಕಗೊಂಡ ದರ್ಜೆ-2ರ ಅಧಿಕಾರಿಗಳಿಗೆ ಎಂಡಿ ಪ್ರಿಯಾಂಗಾ ಕರೆ BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು