NEWSದೇಶ-ವಿದೇಶಸಿನಿಪಥ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಜೈಲಾ ಇಲ್ಲ ಬೇಲಾ- ಒಂದು ವಾರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ ಸೇರಿದಂತೆ 7 ಮಂಗಿಗೆ ಮತ್ತೆ ಜೈಲಾಗುತ್ತಾ ಅಥವಾ ಬೇಲಾಗುತ್ತಾ ಅನ್ನೋ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಕುತೂಹಲವಾಗಿಯೇ ಉಳಿದಿದೆ.

ಸದ್ಯ ಎರಡೂ ಕಡೆ ವಕೀಲರ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ನ್ಯಾಯಪೀಠ ಬಳಿಕ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿ ಆದೇಶವನ್ನು ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್‌ ದ್ವಿ-ಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಹೈಕೋರ್ಟ್‌ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿದ ಸುಪ್ರೀಂ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

ಇನ್ನು ಒಂದೂವರೆ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿ ಕಡೆಯಲ್ಲಿ ಇತರೇ ಆರೋಪಿಗಳ ಪರ ವಕೀಲರ ಮಾಹಿತಿ ಕೇಳಿತು. ಎಲ್ಲ ಆರೋಪಿಗಳ ಪರ ವಕೀಲರು ಲಿಖಿತ ವಾದ ಮಂಡಿಸಬಹುದು. ಇಂದಿನಿಂದ ಒಂದು ವಾರದಲ್ಲಿ ಮೂರು ಪುಟಗಳ ಮಾಹಿತಿ ನೀಡಬೇಕು. ಬಳಿಕ ಆದೇಶ ನೀಡಲಾಗುವುದು ಎಂದು ಕೋರ್ಟ್‌ ಹೇಳಿದೆ.

ನಟ ದರ್ಶನ್‌ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ವಾದ ಮಂಡಿಸಿದ್ದರೆ, ಸರ್ಕಾರಿ ವಕೀಲರಾಗಿ ಸಿದ್ಧಾರ್ಥ ಲೂಥ್ರಾ ಪ್ರಬಲವಾಗಿಯೇ ವಾದ ಮಂಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!