CrimeNEWSನಮ್ಮರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕ್ಷಣಕ್ಷಣಕ್ಕೂ ಟ್ವಿಸ್ಟ್‌ – ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷನ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟಿ ಪವಿತ್ರಾ ಗೌಡ ಅವರ ಕುರಿತು ಅಶ್ಲೀಲ ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ನಡೆದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರನ್ನು ಪೊಲೀಸರು ಈಂದು ಬೆಳಗ್ಗೆಯೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇದೇ ಕೇಸ್‌ನಲ್ಲಿ ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾಸ್‌ ರಘು ದರ್ಶನ್‌ ಎಂಬಾತನನ್ನೂ ಪೊಲೀಸರು ಬಂಧಿಸಿದ್ದು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ತೂಗುದೀಪ ಸೇನಾ ಚಿತ್ರದುರ್ಗದ ಜಿಲ್ಲಾಧ್ಯಕ್ಷ ರಘು ದರ್ಶನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕಳುಹಿಸಲು ದರ್ಶನ್‌ ಅವರು ರಘು ದರ್ಶನ್‌ ಅವರ ನೆರವು ಪಡೆದಿದ್ದರು ಎನ್ನಲಾಗಿದೆ. ಕೊಲೆ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದ ಸಂಚಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದು, ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ಮಾಡುತ್ತಿದ್ದಾರೆ.

ರೇಣುಕಾಸ್ವಾಮಿ ಪತ್ನಿ 5ತಿಂಗಳ ಗರ್ಭಿಣಿ: ರೇಣುಕಾಸ್ವಾಮಿ ಹಾಗೂ ಸಹನಾ 2023ರ ಜೂನ್‌ 28ರಂದು ಮದುವೆಯಾಗಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರೂ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸುವವರಿದ್ದರು. ಇದರ ಮಧ್ಯೆಯೇ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ರೇಣುಕಾಸ್ವಾಮಿ ಹತ್ಯೆಯಾಗಿರುವ ವಿಷಯವನ್ನು ಕುಟುಂಬಸ್ಥರು ಇನ್ನೂ ತಿಳಿಸಿಲ್ಲ. ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದಷ್ಟೇ ಹೇಳಿದ್ದಾರೆ.

ಇನ್ನು ಪತಿಯ ಹತ್ಯೆ ವಿಚಾರ ತಿಳಿದರೆ, ಗರ್ಭವತಿಯಾಗಿರುವ ಸಹನಾಗೆ ಏನಾಗುತ್ತದೆಯೋ ಎಂಬ ಭಯದಿಂದ ಕುಟುಂಬಸ್ಥರು ದುಃಖಿತರಾಗಿದ್ದು, ಈ ಸಾವಿನ ವಿಚಾರವನ್ನು ಹೇಗೆ ತಿಳಿಸುವುದು ಎಂಬ ಗೊಂದಲದಲ್ಲಿ ಸಿಲುಕಿ ಒದ್ದಾಡುತ್ತಾರೆ. ಇತ್ತ ಮಗನನ್ನು ಕಳದುಕೊಂಡಿದ್ದು ಈಗ ಸೊಸೆಗೆ ಏನಾದರೂ ಆದರೆ ಎಂಬ ಭಯದಲ್ಲಿ ಇದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...