NEWSನಮ್ಮಜಿಲ್ಲೆನಮ್ಮರಾಜ್ಯ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ತಕ್ಷಣ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸದಂ ಅವರು, ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಟ್ಟು 880 ಎಕರೆ ರಿಡೂ ಮಾಡಲಾಗಿದೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. ಆಗಿದೆ. 2014ರಲ್ಲಿ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದ್ದರು.

ನ್ಯಾ. ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಹಲವು ವರ್ಷಗಳೇ ಕಳೆದರೂ ಇದುವರೆಗೂ ಮುಖ್ಯಮಂತ್ರಿಗಳ ಕಾರ್ಯಾಲಯವು ಈ ವರದಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯವಾಗುವಂತೆ ಮಾಡಿಲ್ಲ. ಸರ್ಕಾರದ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದರು.

ನ್ಯಾಯಾಂಗ ತನಿಖಾ ವರದಿಗಳನ್ನು ಸಾರ್ವಜನಿಕ ದಾಖಲೆಗಳೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಬಾಧ್ಯತೆಯಾಗಿದೆ. ಹಾಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಕೆಂಪಣ್ಣ ಆಯೋಗದ ವರದಿಯನ್ನು ಬಿಡುಗಡೆ ಮಾಡಬೇಕು. ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆ ಮಾಡಬೇಕು. ವರದಿ ಆಧಾರದ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ನಾಯಕರು ಈ ವಿಚಾರವಾಗಿ ವರದಿ ಬಹಿರಂಗಕ್ಕೆ ಆಗ್ರಹಿಸುತ್ತಿದ್ದಾರೆ. ಆದರೆ ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಏಕೆ ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸಲಿಲ್ಲ, ಏಕೆ ಸದನದಲ್ಲಿ ಮಂಡಿಸಲಿಲ್ಲ? ಅಧಿಕಾರದಲ್ಲಿದ್ದಾಗ ಮೌನ ವಹಿಸಿದ್ದ ಬಿಜೆಪಿ ನಾಯಕರಿಗೆ ಈಗ ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ನಾಯಕರು ಪರಸ್ಪರ ಆರೋಪ ಮಾಡುತ್ತ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ ಜಗದೀಶ್ ಎಂದು ಬೇಸರ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ