ಬೆಂಗಳೂರು: ಭಾರತೀಯ ಮಸಾಲೆ ಮಂಡಳಿ (Spices Board of India)ಯಲ್ಲಿ 2 ರಿಸರ್ಚ್ ಅಸೋಸಿಯೇಟ್ (Research Associate) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಡುಕ್ಕಿ, ಹಾಸನದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಕೂಡಲೇ ಇ-ಮೇಲ್ ಮಾಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ನಿಮಗೆ ಮಾಹಿತಿ ನೀಡಲಾಗುತ್ತಿದ್ದು, ಈ ಕೆಳಗಿನಂತೆ ಇದೆ.
ಸಂಸ್ಥೆ: ಭಾರತೀಯ ಮಸಾಲೆ ಮಂಡಳಿ
ಹುದ್ದೆ: ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆ: 2
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ವೇತನ ಮಾಸಿಕ: ₹ 35,000-40,000
ಉದ್ಯೋಗದ ಸ್ಥಳ: ಇಡುಕ್ಕಿ, ಹಾಸನ
ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 3, 2023
ವಿದ್ಯಾರ್ಹತೆ: ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಭಾರತೀಯ ಮಸಾಲೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 3, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ: ಮಾಸಿಕ ₹ 35,000-40,000
ಉದ್ಯೋಗದ ಸ್ಥಳ:
ಇಡುಕ್ಕಿ, ಹಾಸನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಮಾರ್ಚ್ 3ರೊಳಗೆ ಕಳುಹಿಸಬೇಕು.
ಸಂದರ್ಶನ ನಡೆಯುವ ಸ್ಥಳ:
ಮಸಾಲೆ ಮಂಡಳಿ ಮುಖ್ಯ ಕಚೇರಿ
ಸುಗಂಧ ಭವನ
ಎನ್.ಎಚ್. ಬೈ ಪಾಸ್
ಪಲರಿವಟ್ಟಂ
ಕೊಚ್ಚಿ – 682025
ಪ್ರಮುಖ ದಿನಾಂಕಗಳು: ನೋಟಿಫಿಕೇಶನ್ ಬಿಡುಗಡೆ ದಿನಾಂಕ: 21/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್ 3, 2023
ಸಂದರ್ಶನ ನಡೆಯುವ ದಿನ: ಮಾರ್ಚ್ 15, 2023 ಬೆಳಗ್ಗೆ 10.30 ಕ್ಕೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 0484-2333610 to 616 ಗೆ ಸಂಪರ್ಕಿಸಿ