NEWSನಮ್ಮಜಿಲ್ಲೆಬೆಂಗಳೂರು

ಎಎಪಿ ದೂರು ನೀಡಿದ್ದರ ಫಲಶೃತಿ: ವೈಟ್ ಟಾಪಿಂಗ್ ರಸ್ತೆ ಗುಣಮಟ್ಟ ಪರೀಕ್ಷಿಸಿದ ಲೋಕಾಯುಕ್ತ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಹಲಸೂರು ಕೆರೆಯ ಸಮೀಪದ ಕೆನ್ನಿಂಗ್ಟನ್‌ ಜಂಕ್ಷನ್ ಬಳಿ ಕುಸಿದಿದ್ದ ಬಿಬಿಎಂಪಿ ವೈಟ್ ಟಾಪಿಂಗ್ ರಸ್ತೆಯನ್ನು ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ಕಾರ್ಯ ಪಾಲಕ ಅಭಿಯಂತರ ನಿರಂಜನ್ ನೇತೃತ್ವದ ತಂಡ ಪರಿಶೀಲನೆ ನಡೆಸಿತು.

ವೈಟ್ ಟಾಪಿಂಗ್ ರಸ್ತೆ ಕುಸಿತಕ್ಕೆ ಸಂಬಂಧಪಟ್ಟಂತೆ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತ್ತು. ಈ ಸಂಬಂಧ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಡಾ. ಸತೀಶ್ ಕುಮಾರ್ ನೀಡಿದ ದೂರು ದಾಖಲಿಸಿಕೊಂಡ ಲೋಕಾಯುಕ್ತ ಇಲಾಖೆ, ಗುಂಡಿ ಬಿದ್ದ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಗುಣಮಟ್ಟ ಪರಿಶೀಲನೆ ನಡೆಸಿದೆ.

ಪರಿಶೀಲನೆ ಬಳಿಕ ಮಾತನಾಡಿದ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಮೋಹನ್, ಜನರ ಹಣ ಪೋಲಾಗುತ್ತಿರುವುದನ್ನು ಮನಗಂಡು ನಾವು ಲೋಕಾಯುಕ್ತರಿಗೆ ದೂರು ನೀಡಿದ್ದೆವು. ನಮ್ಮ ದೂರಿಗೆ ಸ್ಪಂದಿಸಿದ ಲೋಕಾಯುಕ್ತರು ಸ್ಥಳಕ್ಕೆ ಆಗಮಿಸಿ ಗುಣಮಟ್ಟವನ್ನು ಪರಿಶೀಲನೆ ಮಾಡಿದ್ದಾರೆ ಎಂದರು.

ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್‌ರವರು ವಾಹಿನಿಯೊಂದಕ್ಕೆ ಹೇಳಿಕೆ ನೀಡುವ ಸಂದರ್ಭದಲ್ಲಿ ರಸ್ತೆ ಕೆಳಗಡೆ ಪೈಪ್‌ಲೈನ್ ಹೋಗಿದೆ ನೀರು ಸೋರಿಕೆಯಾಗಿ ರಸ್ತೆ ಕುಸಿದಿದೆ ಎಂದಿದ್ದರು. ಆದರೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳು ಇಲ್ಲಿ ಹಾಜರಿದ್ದು, ಯಾವುದೇ ಪೈಪ್‌ಲೈನ್ ಹೋಗಿಲ್ಲ, ಇಲ್ಲಿ ಆಗಿರುವುದಕ್ಕೆ ನಾವು ಜವಾಬ್ದಾರರಲ್ಲ ಎನ್ನುತ್ತಿದ್ದಾರೆ. ಇಲ್ಲಿ ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಯಾರೇ ಭ್ರಷ್ಟಾಚಾರ ಮಾಡಿದ್ದರೂ ನಾವು ಪಾಠ ಕಲಿಸದೇ ಬಿಡುವುದಿಲ್ಲ ಎಂದು ಡಾ. ಸತೀಶ್ ಮೋಹನ್ ಹೇಳಿದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಮೋಹನ್, ವಿಶ್ವನಾಥ್, ಅಶೋಕ್ ಮೃತ್ಯುಂಜಯ, ಮರಿಯ ಸೇರಿದಂತೆ ಇನ್ನಿತರ ನಾಯಕರುಗಳು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ