NEWSದೇಶ-ವಿದೇಶನಮ್ಮರಾಜ್ಯವಿಡಿಯೋ

ಕನಿಷ್ಠ ಪಿಂಚಣಿ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ನಿವೃತ್ತ ನೌಕರರ ಉಪವಾಸ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿ
  • ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಸೇರಿ ರಾಜ್ಯದಿಂದ 360 ಮಂದಿ ನಿವೃತ್ತ ನೌಕರರು ಭಾಗಿ

ನ್ಯೂಡೆಲ್ಲಿ: ಕನಿಷ್ಠ ಪಿಂಚಣಿ ಬೇಡಿಕೆ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಪಿಎಸ್ ನಿವೃತ್ತ ನೌಕರರ ಪ್ರತಿಭಟನಾ ಸಮಾವೇಶ ಎನ್‌ಎಸಿ ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ ಡಿ.7ರ ಇಂದು ಜರುಗಿತು.

ಈ ಪ್ರತಿಭಟನಾ ಸಭೆಯಲ್ಲಿ ಕರ್ನಾಟಕದಿಂದ ಸುಮಾರು 360 ಮಂದಿ ನಿವೃತ್ತ ನೌಕರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ ಆಗಮಿಸಿದ ನಿವೃತ್ತರ ಸಂಖ್ಯೆ ಸುಮಾರು 20 ಸಾವಿರದಷ್ಟು ಇತ್ತು.

ಪಾರ್ಲಿಮೆಂಟ್ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಇಂದಿನ ಸಭೆಯಲ್ಲಿ ಆಗಮಿಸಿದ್ದ ವಿವಿಧ ರಾಜ್ಯಗಳ ಮುಖಂಡರು ಮಾತನಾಡಿ ಕೂಡಲೇ ನಮ್ಮ ಕನಿಷ್ಠ ಪಿಂಚಣಿ ಬೇಡಿಕೆ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿದರು.

ಇನ್ನು ನಾಳೆ ಅಂದರೆ ಡಿ.8ರಿಂದ ನಿರಂತರವಾಗಿ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಹಾಗೂ ನಂತರ ದಿನಗಳಲ್ಲಿ ರಾಷ್ಟ್ರೀಯ ನಾಯಕರು ಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲು ಈಗಾಗಲೇ ನಿರ್ಧರಿಸಿದ್ದಾರೆ.

ನಾಳೆಯಿಂದ ಅಂದರೆ ಡಿ.8ರಿಂದ ಡಿ.24ರವರೆಗೆ ಜಂತರ್ ಮಂತರ್‌ನಲ್ಲಿ  ತೀವ್ರತರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದರೆ ಕೈ ಬಿಡಲಾಗುವುದು ಎಂದು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು