ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಕಠಿಣ ಶಿಕ್ಷೆ, 63 ಲಕ್ಷ ರೂ. ದಂಡ : ಲೋಕಾಯುಕ್ತ ಕೋರ್ಟ್ ತೀರ್ಪು
ದಂಡ ಪಾವತಿಸದಿದ್ರೆ ಆರೋಪಿ ಅಥವಾ ಪತ್ನಿಯ ಸ್ಥಿರ, ಚರಾಸ್ತಿ ಮುಟ್ಟುಗೋಲು
ಬೆಳಗಾವಿ : ಆದಾಯಕಿಂತ ಹೆಚ್ಚಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ ನಿವೃತ್ತ ಸಾರಿಗೆ ಅಧಿಕಾರಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 63 ಲಕ್ಷ ರೂ. ದಂಡ ವಿಧಿಸಿ ಬೆಳಗಾವಿಯ ಲೋಕಾಯುಕ್ತ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಪಿ. ಶಾಂತಕುಮಾರ್ ಶಿಕ್ಷೆಗೆ ಒಳಗಾದ ನಿವೃತ್ತ ಅಧಿಕಾರಿ. ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ ನವರಾದ ಶಾಂತಕುಮಾರ್ ಪ್ರಸ್ತುತ ಬೆಳಗಾವಿ ನಗರದ ಆಂಜನೇಯ ನಗರದಲ್ಲಿ ವಾಸವಾಗಿದ್ದಾರೆ.
ಬೀದರ್ ಜಿಲ್ಲೆಯ ಹುಮನಾಬಾದ್‌ನಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಆಗಿದ್ದಾಗ ಅಕ್ರಮ ಆಸ್ತಿ ಸಂಪಾದಿಸಿದ್ದರು ಎಂ ಆರೋಪದ ಮೇರೆಗೆ ಆ ಬಗ್ಗೆ ಮಾಹಿತಿ ಕಲೆಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು 2010ರ ಮೇ 3 ರಂದು ಪ್ರಕರಣ ದಾಖಲಿಸಿದ್ದರು.
ಖಚಿತ ಮಾಹಿತಿ ಮೇರೆಗೆ ಬೆಳಗಾವಿಯ ಆಂಜನೇಯ ನಗರದಲ್ಲಿದ್ದ ಶಾಂತಕುಮಾರ್ ಮನೆ ಹಾಗೂ ಹುಮನಾಬಾದ್ ಕಚೇರಿ ಮೇಲೆ ಅಧಿಕಾರಿಗಳು ನಡೆಸಿದ ದಾಳಿ ನಡೆಸಿದ್ದರು ಆ ವೇಳೆ 1.14 ಕೋಟಿ ಎಊ. ಮೌಲ್ಯದ ಆಸ್ತಿ ಪತ್ತೆಯಾಗಿತ್ತಯ.
ಘಟನೆಗೆ ಸಂಬಂಧಿಸಿದತೆ ಅಂದಿನ ಲೋಕಾಯುಕ್ತ ಇನ್ಸ್ ಪೆಕ್ಟರ್ ಆರ್.ಬಿ. ಹವಾಲ್ದಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪುಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಮೋಹನ ಪ್ರಭು ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಾಂತಕುಮಾರ್ ಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 63 ಲಕ್ಷ ರೂ. ದಂಡ ವಿಧಿಸಿದ್ದಾರೆ.
ಇನ್ನು ಒಂದು ವೇಳೆ ದಂಡ ಪಾವತಿಸದಿದ್ರೆ ಆರೋಪಿ ಅಥವಾ ಪತ್ನಿಯ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕುವಂತೆಯೂ ಆದೇಶ ನೀಡಿದ್ದಾರೆ. ಈ ಮೂಲಕ ಮತ್ತೆ ಲೋಕಯುಕ್ತ ಭ್ರಷ್ಟರ ಬೇಟೆಗೆ ಸಜ್ಜಾಗಿದೆ ಎಂಬ ಸಂದೇಶವನ್ನು ರವಾನಿಸಿದಂತಾಗಿದೆ.
Related
You Might Also Like
KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್ ಚಾಲಕನ ಸ್ಥಿತಿ ಚಿಂತಾಜನಕ
ರಾಣಿಪೇಟೆ: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾದಲ್ಲಿ ಲಾರಿ ಚಾಲಕ ಸೇರಿ ಲಾರಿಯಲ್ಲಿದ್ದ...
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಣೆ
ನ್ಯೂಡೆಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಮುಂದೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ....
ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ
ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿರುವುದು ದುರದೃಷ್ಟಕರ. ಅದು ಹೋಗಲಿ 7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಸಾರಿಗೆ ಸಚಿವರೊಂದಿಗೆ ನಾವು...
NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನೆ ಮನವಿ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನವಲಗುಂದ ಘಟಕದ ನಿರ್ವಾಹಕ ಎಸ್.ಎನ್. ಚೀರ್ಚಿನಕಲ್ ಅವರು ಕರ್ತವ್ಯದ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿಗೆ ತಂದಿರುವ ಅಧಿಕಾರಿಗಳ ವಿರುದ್ಧ...
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್ ಸರ್ಕಾರ…!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಮುನ್ನೆಲೆಗೆ ಬಂದಿದ್ದು ಸರಿ ಸಮಾನ ವೇತನ ನಿರ್ಧಾರ ತೆಗೆದುಕೊಳ್ಳುವ...
KSRTC 4 ನಿಗಮಗಳ ಬಸ್ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿ ಇದೇ ಜ.5ರಿಂದ ಜಾರಿಗೆ ಬಂದಿದೆ. ಆದರೆ ಈ ಪರಿಷ್ಕೃತ ದರ...
KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ನೌಕರರ ಹಲವಾರು ವರ್ಷಗಳ ಕನಸು ಇಂದು ಅಧಿಕೃತವಾಗಿ ನನಸಾಗಿದ್ದು, ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ...
NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ
ಹುಬ್ಬಳ್ಳಿ: ಉದ್ದೇಶ ಪೂರ್ವಕವಾಗಿ ವಾಹನ ತಪಾಸಣೆ ನಡೆಸಿ ನನ್ನನ್ನು ಅಮಾನತು ಮಾಡುವ ಸಂಚು ರೂಪಿಸಲಾಗಿದೆ ಎಂದು ಮನನೊಂದ ನಿರ್ವಾಹಕರೊಬ್ಬರು ಡ್ಯೂಟಿ ಮೇಲೆ ಇದ್ದಾಗಲೇ ವಿಸ ಸೇವಿಸಿ ಆತ್ಮಹತ್ಯೆಗೆ...
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ
ಬೆಂಗಳೂರು: ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದ್ದು, ಡೆಂಗ್ಯೂ, ಉಸಿರಾಟ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಕ್ರಿಯಾ ಆಸ್ಪತ್ರೆ ಮತ್ತು ಅದ್ವಿಕಾ...
ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ
ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು ಪ್ರೀತಿಸಬೇಕು. ಯಾಕೆಂದರೆ ಕನ್ನಡ ನಮ್ಮ ನಾಡಿ ಮಿಡಿತ, ಹೃದಯದ ಬಡಿತ, ಮಾತೃ...
ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ,...