CrimeNEWSದೇಶ-ವಿದೇಶ

ಅದಾನಿ ಅವ್ಯವಹಾರ ಪ್ರಸ್ತಾಪಿಸಿದ್ದಕ್ಕೆ ಸಂಜಯ್‌ ಸಿಂಗ್‌ ವಿರುದ್ಧ ಕೇಂದ್ರದಿಂದ ಸೇಡಿನ ರಾಜಕಾರಣ: ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಸಭೆಯಲ್ಲಿ ಅದಾನಿ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ಕಾರಣಕ್ಕೆ ಸಂಸದ ಸಂಜಯ್‌ ಸಿಂಗ್‌ ಅವರ ವಿರುದ್ಧ ಷಡ್ಯಂತ್ರದಿಂದ ಸಾಕ್ಷ್ಯಾಧಾರಗಳಿಲ್ಲದ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿರುವುದು ನಾಚಿಕೆಗೇಡಿನ ವಿಚಾರ. ಇದೊಂದು ಹೇಡಿತನದ ಕೃತ್ಯ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕಿಡಿಕಾರಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಬಕಾರಿ ನೀತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ನಗರದಲ್ಲಿ ಗುರುವಾರ ಮೊಂಬತ್ತಿ ಹಿಡಿದು ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸಂಸ್ಥೆಗಳನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ತಮ್ಮ ವಿರುದ್ಧ ಧ್ವನಿ ಎತ್ತಿದವರನ್ನು ಹತ್ತಿಕುವ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಇದಕ್ಕಾಗಿ ಸಂವಿಧಾನ ವಿರೋಧಿ ಕೃತ್ಯಗಳನ್ನು ನಡೆಸುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ಹಗರಣಕ್ಕೆ ಸಂಬಂಧಿಸಿ ಇದುವರೆಗೆ ಒಂದು ರೂಪಾಯಿ ಭ್ರಷ್ಟಾಚಾರದ ದುಡ್ಡನ್ನು ವಶಪಡಿಸಿಕೊಂಡಿಲ್ಲ. ಭ್ರಷ್ಟಾಚಾರವೇ ನಡೆಯದ ಮೇಲೆ ಅಕ್ರಮ ಹಣವನ್ನು ಅಧಿಕಾರಿಗಳಿಗೆ ವಶ ಪಡಿಸಿಕೊಳ್ಳಲು ಹೇಗೆ ತಾನೆ ಸಾಧ್ಯವಾಗುತ್ತದೆ ಎಂದು ಡಾ. ಸತೀಶ್ ಪ್ರಶ್ನಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜಕಾರಣ ಮಾಡಬೇಕೇ ವಿನಃ ಅಧಿಕಾರದ ದರ್ಪದಲ್ಲಿ ತನ್ನ ಅದೀನದಲ್ಲಿ ಬರುವ ಕೇಂದ್ರ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಖಂಡನಾರ್ಹ. ತಕ್ಷಣ ಸಂಜಯ್‌ ಸಿಂಗ್‌ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಮುಖಂಡ ವಿಜಯ್ ಶರ್ಮಾ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ಚಂದನ್ ಶೆಟ್ಟಿ ಜ್ಯೋತಿಶ್ ಕುಮಾರ್, ಶಿವಕುಮಾರ್ ,ಅನಿಲ್ ನಾಚಪ್ಪ , ಮಂಜುರಾವ್ ಪಾಪಣ್ಣ, ಸಿದ್ದು ,ಉಪಾಧ್ಯಾಯ ಇರ್ಷಾದ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ