ಬೆಂಗಳೂರು: ಬಿಬಿಎಂಪಿ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಬೃಹತ್ ಇ-ಖಾತಾ ಮೇಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 25 ಲಕ್ಷ ಸ್ವತ್ತುಗಳ ಪೈಕಿ ಈಗಾಗಲೇ 5,34,674 ಸ್ವತ್ತುಗಳಿಗೆ ಖಾತಾದಾರರು ಅಂತಿಮ ಇ-ಖಾತಾವನ್ನು ಪಡೆದಿದ್ದು, ಬಿಬಿಎಂಪಿ e-Khata ವ್ಯವಸ್ಥೆಗೆ ಭಾರತ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಸಂದಿದೆ.
ಯಲಹಂಕ ವಲಯದಲ್ಲಿನ ಒಟ್ಟು 2,28,146 ಸ್ವತ್ತು ಗಳ ಪೈಕಿ ಇಲ್ಲಿಯವರೆಗೆ 71,055 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ. ಬ್ಯಾಟರಾಯನಪುರ ವಿಭಾಗದಲ್ಲಿನ ಒಟ್ಟು 1,81,135 ಸ್ವತ್ತುಗಳ ಪೈಕಿ 51,289 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.
ಇ-ಖಾತಾ ಮೇಳದ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಯಲಹಂಕ ವಲಯದ ಸಹಕಾರ ನಗರ ಆಟದ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ.
ಅಥವಾ ಬಿಬಿಎಂಪಿ ಎಲ್ಲಾ ವಾರ್ಡ್ ಗಳ ಕಂದಾಯ ಅಧಿಕಾರಿಗಳ ಕಛೇರಿ , ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಇ-ಖಾತಾ ಪಡೆಯಬಹುದು ಅಥವಾ ಜನಸೇವಕರ ಸೇವೆ ಪಡೆದು ಇ-ಖಾತಾ ಅರ್ಜಿ ಸಲ್ಲಿಸಲು 080-49203888 ಗೆ ಕರೆ ಮಾಡಿದರೆ, ತಮ್ಮ ಮನೆಗೆ ಜನ ಸೇವಕರು ಬಂದು ಇ-ಖಾತಾಗೆ ಅರ್ಜಿ ಸಲ್ಲಿಸಲಿದ್ದಾರೆ.
ಈ ವೇಳೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ ರೇವಣ್ಣ, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಯಲಹಂಕ ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...