NEWSನಮ್ಮಜಿಲ್ಲೆನಮ್ಮರಾಜ್ಯ

ಹಣಕಾಸಿನ ಇತಿಮಿತಿಯೊಳಗೆ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ : ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಣಕಾಸಿನ ಇತಿಮಿತಿಯೊಳಗೆ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಮಂಗಳವಾರ ಬೆಳಗ್ಗೆ ವಿಧಾನಸೌಧದ ಮಹಾದ್ವಾರದ ಬಳಿ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ವೇತನ ಪರಿಷ್ಕರಣೆ ಸಂಬಂಧ ಬೇಡಿಕೆ ಇಟ್ಟಿರುವ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ, ಆರ್ಥಿಕ ಇತಿಮಿತಿಯೊಳಗೆ ಅನುಕೂಲ ಮಾಡಿಕೊಡುವೆ ಎಂದು ತಿಳಿಸಿದರು.

ಇನ್ನು ಸಾರಿಗೆ ಸಂಸ್ಥೆಗೆ‌ ಈ ವರ್ಷ ಒಂದು ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದ ಅವರು, ಬಜೆಟ್‌ನಲ್ಲಿ ಘೋಷಿಸಿರುವ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಏಪ್ರಿಲ್‌ ಒಂದರಿಂದ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಹಳ್ಳಿಗಳ ಶಾಲಾ ಮಕ್ಕಳಿಗೆ ಮಿನಿ ಬಸ್‌ಗಳನ್ನು ಶೈಕ್ಷಣಿಕ ವರ್ಷಾರಂಭದಿಂದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಮಹಿಳೆಯರು ಗೌರವದ ಜತೆಗೆ ಅವರು ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್‌ ಬಸ್‌ಗಳನ್ನು ಪರಿಚಯಿಸಬೇಕು. ಇರುವ ಬಸ್‌ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಠ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದರು.

ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜತೆಗಿರುತ್ತದೆ. ಜನರಿಗೆ ಉತ್ತಮ ಸೇವೆ ಒದಗಿಸೋಣ ಎಂದರು.

ಕೆಎಸ್ಆರ್ಟಿಸಿ ತನ್ನದೇ ಇತಿಹಾಸವನ್ನು ಹೊಂದಿದ್ದು, ಇಂಥ ಸೇವೆಯು ಖಾಸಗೀಕರಣದಿಂದ ಪೈಪೋಟಿ ಎದುರಿಸುತ್ತಿದೆ. ಖಾಸಗಿಯವರು ಲಾಭದಾಯಕ ಮಾರ್ಗಗಳಲ್ಲಿ ಮಾತ್ರ ಸಂಚಾರ ನಡೆಸುತ್ತಾರೆ. ಸಾಮಾಜಿಕವಾಗಿ ಕೆಲಸ ಮಾಡುವ ಮಾರ್ಗಗಳಮ್ಮ ಕರಾರಸಾನಿಕ್ಕೆ ಬಿಡುತ್ತಾರೆ. ನಾವು ಸೇವಾ ವಲಯದಲ್ಲಿಯೂ ಹಾಗೂ ವಾಣಿಜ್ಯ ಮಾರ್ಗಗಳಲ್ಲಿಯೂ ಸಂಚರಿಸಿ ನಿಗಮವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು.

ಆದಾಯ ಹೆಚ್ಚಿಸಿ: ಕೋವಿಡ್ ಹಾಗೂ ನಂತರದಲ್ಲಿ ಎಲ್ಲ ರಂಗಗಳಲ್ಲಿ ಕುಸಿತ ಕಂಡಿತು. ಈ ಸಂದರ್ಭದಲ್ಲಿ ಸಂಸ್ಥೆ ಸಾಕಷ್ಟು ತೊಂದರೆ ಅನುಭವಿಸಿದೆ. ಆ ಸಂದರ್ಭದಲ್ಲಿ ಸರ್ಕಾರ ಸಂಪೂರ್ಣವಾಗಿ ಹಣಕಾಸಿನ ಬೆಂಬಲ ನೀಡಿದೆ. 2 ವರ್ಷವೂ ಬೆಂಬಲ ನೀಡಿ ನೌಕರರಿಗೆ ವೇತನ, ಡೀಸೆಲ್ ಬಿಲ್ ಗೆ ಅನುದಾನ ಒದಗಿಸಲಾಗಿದೆ. ನಷ್ಟದಲ್ಲಿದ್ದ ಸಾರಿಗೆ ನಿಗಮಗಳಿಗೆ 4600 ಕೋಟಿ ರೂ. ನೀಡಲಾಗಿದೆ. ಇತ್ತೀಚೆಗೆ ಒಂದು ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ದವಿದ್ದು, ತೆರಿಗೆ ವಿನಾಯ್ತಿ ನೀಡಲು ಕೂಡ ಸಿದ್ಧವಿದೆ. ನಿಗಮಗಳು ವಾಣಿಜ್ಯ ಮಾರ್ಗಗಳ ಸಂಚಾರ ಹಾಗೂ ಸೋರಿಕೆ ತಡೆಯುವ ಮೂಲಕ ಆದಾಯ ಹೆಚ್ಚಳಕ್ಕೆ ಪ್ರಯತ್ನ ಪಡಬೇಕು. ಖರೀದಿಯಲ್ಲಿನ ಪಾರದರ್ಶಕತೆ ತರಬೇಕು. ಬಿಡಿ ಭಾಗ, ಆಯಿಲ್, ಟೈಯರ್ ಖರೀದಿಯಲ್ಲಿ ಪಾರದರ್ಶಕತೆ ತಂದು ವೆಚ್ಚವನ್ನು ಕಡಿಮೆ ಮಾಡಬೇಕು. ಸಾರಿಗೆ ಸಂಸ್ಥೆಯನ್ನು ಮತ್ತೊಮ್ಮೆ ಲಾಭದಾಯಕವಾಗಿ ನಡೆಸಬೇಕು ಎಂಬ ಅಭಿಲಾಷೆಗೆ ಎಲ್ಲರೂ ಸಹಕರಿಸಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್, ಕೆ.ಎಸ್.ಆರ್.ಟಿ. ಸಿ ಅಧ್ಯಕ್ಷ ಚಂದ್ರಪ್ಪ , ಉಪಾಧ್ಯಕ್ಷ ಮೋಹನ್ ಮೆಣಸಿನಕಾಯಿ, ಶಾಸಕರಾದ ಸೋಮಶೇಖರ್ ರೆಡ್ಡಿ, ಸತೀಶ್ ರೆಡ್ಡಿ, ಯಾದವ್ , ನಿವೃತ್ತ ಐ.ಎ. ಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ