Vijayapatha – ವಿಜಯಪಥ
Friday, November 1, 2024
CrimeNEWSಬೆಂಗಳೂರು

ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆಯಾದ ರೌಡಿ ಸಿದ್ದಾಪುರ ಮಹೇಶ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾಮೀನು ಪಡು ಜೈಲಿನಿಂದ ಬಿಡುಗಡಗೊಂಡು ಹೊರ ಬರುತ್ತಿದ್ದಂತೆ ರೌಡಿಶೀಟರ್ ಸಿದ್ದಾಪುರ ಮಹೇಶ್‌ನನ್ನು ನಡುರಸ್ತೆಯಲ್ಲೇ ಪರಪ್ಪನ ಅಗ್ರಹಾರದ ಬಳಿ ಭೀಕರವಾಗಿ ಹತ್ಯೆ ಮಾಡಿದೆ ಮತ್ತೊಂದು ರೌಡಿ ಗ್ಯಾಂಗ್‌.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೌಡಿ ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತವನ ಗ್ಯಾಂಗ್‌ಗೇ ಭೀಕರವಾಗಿ ರೌಡಿಶೀಟರ್ ಸಿದ್ದಾಪುರ ಮಹೇಶ್‌ನನ್ನು ಕೊಚ್ಚಿ ಕೊಲೆ ಮಾಡಿದೆ.

ರೌಡಿ ಮಹೇಶ್ ಕೂಡ ಕೊಲೆ, ಕೊಲೆ ಯತ್ನ, ಸುಫಾರಿಯಂತಹ ಹಲವು ಕೇಸ್‌ಗಳಲ್ಲ ಭಾಗಿಯಾಗಿದ್ದ. ಕೊಲೆ ಕೇಸ್‍ನಲ್ಲಿ ಜೈಲಿನಲ್ಲಿದ್ದ ಮಹೇಶ್, ಜಾಮೀನು ಪಡೆದು ಶುಕ್ರವಾರ ರಾತ್ರಿ ಬಿಡುಗಡೆಯಾಗಿದ್ದರಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ರೌಡಿ ವಿಲ್ಸನ್ ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ್ ಸಿದ್ದಾಪುರ ಸುನೀಲ್ ಮತ್ತು ಗ್ಯಾಂಗ್ ಅಡ್ಡಹಾಕಿ ಲಾಂಗ್‍ನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಹೇಶ್ ರಾತ್ರಿ 9.20ರ ವೇಳೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇದ್ದ. ರಾತ್ರಿ 9.45ಕ್ಕೆ ಹೊಸೂರು ರೋಡ್ ಸಿಗ್ನಲ್ ಬಳಿಗೆ ಬಂದಿದ್ದಾನೆ. ಈ ವೇಳೆ ಏಕಾಏಕಿ ಕಾರಿಗೆ ಅಡ್ಡಬಂದ ಆರೇಳು ಜನರಿದ್ದ ಗುಂಪು ಮಚ್ಚು ಬೀಸಿದೆ. ಈ ವೇಳೆ ಮಹೇಶ್ ಕಾರಿನಿಂದ ಇಳಿದು ತಪ್ಪಿಸಿಕೊಳ್ಳಲು ಹಿಂದಕ್ಕೆ ಓಡಲು ಯತ್ನಿಸಿದ್ದಾನೆ. ಈ ವೇಳೆ ಸುಮಾರು ನೂರು ಮೀಟರ್‌ನಷ್ಟು ದೂರ ಅಟ್ಟಾಡಿಸಿಕೊಂಡು ಹೋಗಿ ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

2021ರಲ್ಲಿ ವಿಲ್ಸನ್ ಗಾರ್ಡನ್ ನಾಗನ ಗೆಳೆಯ ಮದನ್ ಅಲಿಯಾಸ್ ಪಿಟೀಲ್‍ನನ್ನು ಇದೇ ಸಿದ್ದಾಪುರ ಮಹೇಶ್ ಮತ್ತವನ ಗ್ಯಾಂಗ್ ಬನಶಂಕರಿ ದೇವಾಲಯದ ಬಳಿ ಅಡ್ಡಹಾಕಿ ಕೊಚ್ಚಿ ಕೊಲೆ ಮಾಡಿತ್ತು. ಆ ಕಾರಣಕ್ಕೆ ನಾಗ ಈ ಮಹೇಶ್‍ನನ್ನು ಮುಗಿಸುವ ಪ್ಲ್ಯಾನ್ ಮಾಡಿದ್ದ.

ಹಾಗೆ ನಾಗನನ್ನು ಸಹ ಹೊಡೆಯೋದಕ್ಕೆ ಮಹೇಶ್ ಪ್ಲ್ಯಾನ್ ಮಾಡಿದ್ದ ಇದರ ನಡುವೆಯೇ ಜೂನ್‍ನಲ್ಲಿ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದ ಮಹೇಶ್ ತಾನು ಪ್ರೀತಿಸಿದ್ದ ಯುವತಿಯನ್ನು ಮದುವೆಯಾಗಿದ್ದ. ಬಳಿಕ ನಾಗನಿಂದ ಜೀವ ಭಯ ಇದೆ ಎಂದು ತಿಳಿದು ಹಳೆಯ ಕೇಸ್‍ನಲ್ಲಿ ಮತ್ತೆ ಜೈಲು ಸೇರಿದ್ದ.

ಮಹೇಶ್‍ನ ಕೊಲೆಯಾಗುವಾಗ ಸ್ಕೂಟರ್‌ನಲ್ಲಿ ಆತನ ಪತ್ನಿ ಕಾರಿನ ಹಿಂದೆಯೇ ಬರುತ್ತಿದ್ದಳು. ಇದೇ ವೇಳೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಇತ್ತ ಮಗ ಬರುತ್ತಿದ್ದಾನೆ ಎಂದು ಆತನ ತಾಯಿ ಅವನಿಗೆ ಇಷ್ಟವಾದ ಮಟನ್ ಚಾಪ್ಸ್ ಮಾಡುತ್ತಿದ್ದಳು. ಆದರೆ ವಿಧಿಯಾಟವೇ ಬೇರೆಯಾಗಿತ್ತು.

ಹತ್ಯೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...