Please assign a menu to the primary menu location under menu

NEWSಉದ್ಯೋಗನಮ್ಮರಾಜ್ಯ

KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಪ್ರಶ್ನೆ ಪತ್ರಿಕೆ ಸಿದ್ಧವಾಗಿದೆ ಎಂದರೆ ಅದರಲ್ಲಿ ಒಂದೆರಡಾದರೂ ತಪ್ಪಾಗಿರಬೇಕು ಎಂಬ ಹಠಕ್ಕೆ ಬಿದ್ದ ರೀತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಯಾವಾಗಲು ನಡೆದುಕೊಳ್ಳುತ್ತಿರುತ್ತದೆ. ತಪ್ಪು ಆದ ಬಳಿಕ ಆ ತಪ್ಪಾಗಿರುವ ಪ್ರಶ್ನೆಗಳಿಗೆ ಕೃಪಾಂಕಗಳನ್ನು ನೀಡುವ ಮೂಲಕ ಅಭ್ಯರ್ಥಿಗಳಿಗೆ ಒಂದು ರೀತಿ ಉಡುಗೊರೆಯನ್ನು ಪ್ರಕಟಿಸುತ್ತದೆ.

ಹೌದು! ಈ ಹಿಂದೆ ಕನ್ನಡ ಪ್ರಶ್ನೆ ಪತ್ರಿಕೆಗಳ ಮೂಲಕವೇ ಎರಡು ಬಾರಿ ಚರ್ಚೆಗೆ ಗುರಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಈ ಬಾರಿ ಕೆಪಿಎಸ್‌ಸಿಯ ಮತ್ತೊಂದು ನಡೆಯಿಂದ ಕನ್ನಡಿಗರು ಹಾಗೂ ಅಭ್ಯರ್ಥಿಗಳು ಆಕ್ರೋಶಿತರಾಗಿದ್ದಾರೆ.

ಇತ್ತ ಕೆಪಿಎಸ್‌ಸಿಯು 5 ಕೃಪಾಂಕಗಳನ್ನು ಪ್ರಕಟಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿ ಒಂದಿಲ್ಲೊಂದು ವಿಷಯದಿಂದ ಭಾರೀ ಚರ್ಚೆಯಲ್ಲಿದೆ. ಅಲ್ಲದೆ ಕೆಪಿಎಸ್‌ಸಿಯ ಕೆಲವು ನಿರ್ಧಾರಗಳಿಗೆ ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಲ್ಲೇ ಇದೆ. ಇದೀಗ ಕೃಪಾಂಕದ ವಿಷಯ ಸಹ ಭಾರೀ ಚರ್ಚೆಗೆ ಕಾರಣವಾಗಿದೆ.

ಅದೇನು ಎಂದರೆ, ಕೆಪಿಎಸ್‌ಸಿ ನಿರ್ಲಕ್ಷ್ಯ ಧೋರಣೆಯಿಂದಾಗಿ ಇದೀಗ ಹೊಸ ನಿರ್ಧಾರವೊಂದು ಚರ್ಚೆಗೆ ಗುರಿಯಾಗಿದೆ. ರಾಜ್ಯದಲ್ಲಿ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ವಿಚಾರವು ಕಳೆದ ಒಂದು ವರ್ಷದಿಂದ ಬೇರೆ ಬೇರೆ ಕಾರಣಕ್ಕೆ ಚರ್ಚೆಯಾಗುತ್ತಲ್ಲೇ ಇದೆ.

ಅಲ್ಲದೆ ಕನ್ನಡದ ಪ್ರಶ್ನೆ ಪತ್ರಿಕೆಗಳನ್ನು ತಪ್ಪಾಗಿ ಪ್ರಕಟಿಸಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕೆಪಿಎಸ್‌ಸಿ ಎರಡನೇ ಬಾರಿಯೂ ಅದೇ ತಪ್ಪನ್ನು ಮಾಡುವ ಮೂಲಕ ಅಭ್ಯರ್ಥಿಗಳ ಹಾಗೂ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಆ ತಪ್ಪನ್ನು ತಿದ್ದಿಕೊಳ್ಳಲು ಹೋಗಿ ಮತ್ತೊಂದು ಎಡವಟ್ಟನ್ನು ಮಾಡಿಕೊಂಡಿದೆ.

ಕರ್ನಾಟಕ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ಹಾಗೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಎರಡನೇ ಬಾರಿ ಪರೀಕ್ಷೆ ಮಾಡಿದಾಗಲೂ ಕೆಪಿಎಸ್‌ಸಿ ತನ್ನ ತಪ್ಪುಗಳನ್ನು ಪುನರಾವರ್ತನೆ ಮಾಡಿತ್ತು. ಆದರೆ, ಈಚೆಗೆ ನಡೆಸಿದ ಪರೀಕ್ಷೆಯ ಕನ್ನಡ ಪತ್ರಿಕೆಯಲ್ಲೂ ಸಾಕಷ್ಟು ತಪ್ಪುಗಳು ಇದ್ದವು ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿ, ಪ್ರತಿಭಟನೆ ಹಾಗೂ ಹೋರಾಟವನ್ನು ಮಾಡಿದ್ದರು.

ಈ ವಿಚಾರದಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ಕೆಪಿಎಸ್‌ಸಿ 5 ಕೃಪಾಂಕಗಳನ್ನು ನೀಡಿದೆ. ಆದರೆ ಇದಕ್ಕೂ ವಿರೋಧ ವ್ಯಕ್ತವಾಗಿದೆ. ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿನ ತಪ್ಪಿಗಾಗಿ 5 ಕೃಪಾಂಕ ಕೊಡುವುದಾಗಿ ಹೇಳಿದೆ. ಆದರೆ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ತಪ್ಪುಗಳು ಇದ್ದವು. ಇದರ ಹೊರತಾಗಿಯೂ ಕೇವಲ 5 ಕೃಪಾಂಕ ಕೊಟ್ಟಿರುವುದು ವಿರೋಧಕ್ಕೆ ಕಾರಣವಾಗಿದೆ.

ಕರ್ನಾಟಕ ಸರ್ಕಾರವು 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ನಡೆದಿತ್ತು. ಇದರ ಕೀ ಉತ್ತರಗಳನ್ನು ಸಹ ಇದೀಗ ಬಿಡುಗಡೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ 5 ಕೃಪಾಂಕ ಕೊಡಲಾಗಿದೆ. ಆದರೆ ತಪ್ಪುಗಳು ಹೆಚ್ಚು ಇದ್ದರೂ ಕೇವಲ 5ಕೃಪಾಂಕ ಕೊಟ್ಟಿರುವುದು ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಅಭ್ಯರ್ಥಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿ ಆನ್‌ಲೈನ್‌ ಅಭಿಯಾನ ಸಹ‌ ಪ್ರಾರಂಭಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು? ಮೈಕ್ರೋ ಫೈನಾನ್ಸ್ ಪ್ರಕರಣದಿಂದ ಸಾವು - ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿ ಎಂದ ಎಚ್‌ಡಿಕೆ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಠಿಣ ನಿಯಮ ರೂಪಿಸಿ: ಸಚಿವ ಶಿವರಾಜ್ ತಂಗಡಗಿ ಪಡಿತರ ಚೀಟಿಯಲ್ಲಿ ಕುಟುಂಬದವರ ಹೆಸರು ಸೇರ್ಪಡೆಗೆ ಅವಕಾಶ ನೀಡಿದ ಆಹಾರ ಇಲಾಖೆ ನಿವೃತ್ತ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ: 7ನೇ ವೇತನ ಆಯೋಗದ ಪಿಂಚಣಿ ಮಂಜೂರು ಮಾಡಿ ಆದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿಯೇ ಸಾರಿಗೆ ನೌಕರರಿಗೆ ಸಮಾನ ವೇತನ ಎಂದು ಹೇಳಿದ್ದೇವೆ: ಸಾರಿಗೆ ಸಚಿವ ರಾಮಲಿಂಗಾರೆ... ಚಲಿಸುತ್ತಿದ್ದ ಬಸ್‌ ಹತ್ತಲು ಹೋಗಿ ಮುಗ್ಗರಿಸಿ ಬಿದ್ದು ಪ್ರಾಣ ಕಳೆದುಕೊಂಡ ಯುವತಿ