ಎಲ್ಲ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ 15,568 ಕೋಟಿ ರೂ. ಹಗರಣ: ಮಾಜಿ ಡಿಸಿಎಂ ಅಶ್ವಥ್ ನಾರಾಯಣ್

ಬೆಂಗಳೂರು: ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಬೆಸ್ಕಾಂ, ಎಸ್ಕಾಂ, ಚೆಸ್ಕಾಂ ಸೇರಿ ಎಲ್ಲ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್ನಲ್ಲಿ 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ದೊಡ್ಡ ಹಗರಣ ಎಂದು ಶಾಸಕ ಅಶ್ವಥ್ ನಾರಾಯಣ್ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಎಸ್.ಆರ್ ವಿಶ್ವನಾಥ್ ಅವರೊಂದಿಗೆ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸ್ಮಾರ್ಟ್ ಮೀಟರ್ಗಳ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ನಾನು, ವಿಶ್ವನಾಥ್ ಇಬ್ಬರು ಸದನದಲ್ಲೂ ಇದರ ಬಗ್ಗೆ ಮಾತನಾಡಿದ್ದೇವೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದರು.
ಇನ್ನು ನಮ್ಮ ಆರೋಪಕ್ಕೆ ಸದನದಲ್ಲೇ ಉತ್ತರ ಕೊಡುತ್ತೇನೆ ಎಂದು ಇಂಧನ ಸಚಿವರು ಹೇಳಿದ್ದರು. ಆದರೆ, ಸದನಕ್ಕೆ ಆ ದಿನ ಬಂದಿದ್ದರೂ ಕೂಡ ಸಚಿವ ಜಾರ್ಜ್ ನಾಪತ್ತೆಯಾಗಿದ್ದರು. ನಮ್ಮ ಆರೋಪಗಳಿಗೆ ಸಚಿವರು ಉತ್ತರ ಕೊಡಲಿಲ್ಲ. ಆದರೆ ಸೋಮವಾರ ಅಧಿಕಾರಿಗಳ ಮೂಲಕ ಹಗರಣ ಆಗಿಲ್ಲ ಎಂದು ಸರ್ಕಾರ ಹೇಳಿಸಿದೆ ಎಂದರು.
ಬೆಸ್ಕಾಂ (BESCOM) ಸೇರಿ ಎಲ್ಲ ಎಸ್ಕಾಂಗಳ (ESCOM) ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್ನಲ್ಲಿ 15,568 ಕೋಟಿ ರೂ. ಮೊತ್ತದ ಹಗರಣ ಆಗಿದೆ. ಇದೊಂದು ರಾಜ್ಯದ ದೊಡ್ಡ ಹಗರಣ. ಸ್ಮಾರ್ಟ್ ಮೀಟರ್ ಕಡ್ಡಾಯನಾ? ಕೆಇಆರ್ಸಿ ಗೈಡ್ಲೈನ್ಸ್ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ತಾತ್ಕಾಲಿಕ ಗ್ರಾಹಕರಿಗೆ ಮಾತ್ರ ಕಡ್ಡಾಯ ಮಾಡಬಹುದೇ ಹೊರತು ಹೊಸ ಗ್ರಾಹಕರಿಗೆ ಕಡ್ಡಾಯ ಮಾಡುವಂತಿಲ್ಲ ಎಂದು ವಿವರಿಸಿದರು.
ಇನ್ನು ಸ್ಮಾರ್ಟ್ಮೀಟರ್ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ. ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ಕೊಟ್ಟಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್ ಪಡೆದುಕೊಳ್ಳುವ ಸಂಸ್ಥೆ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಆದರೆ, ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಅಷ್ಟೇ.
ಟೆಂಡರ್ ಮೌಲ್ಯ 1,920 ಕೋಟಿ ಇಡಬೇಕಿತ್ತು. ಆದರೆ, ಟೆಂಡರ್ನಲ್ಲಿ ಇಟ್ಟಿದ್ದು ಕೇವಲ 107 ಕೋಟಿ ರೂ. ಬ್ಲಾಕ್ಲಿಸ್ಟ್ನಲ್ಲಿ ಇರುವ ಸಂಸ್ಥೆಗೆ ಟೆಂಡರ್ ಕೊಡುವಂತಿಲ್ಲ ಅಂತ ಕೆಟಿಪಿಪಿ ಕಾಯ್ದೆಯಲ್ಲಿದೆ. ಆದರೆ ಉತ್ತರ ಪ್ರದೇಶದಲ್ಲಿ ಬ್ಲಾಕ್ಲಿಸ್ಟ್ ಆಗಿದ್ದ ಬಿಸಿಐಟಿಎಸ್ ಕಂಪನಿಗೆ ಸಾಫ್ಟ್ವೇರ್ ಟೆಂಡರ್ ಕೊಟ್ಟಿರುತ್ತಾರೆ ಎಂದು ಆರೋಪಿಸಿದರು.
ಸ್ಮಾರ್ಟ್ ಮೀಟರ್ಗಳ ದರಗಳಲ್ಲಿ ಬೇರೆ ರಾಜ್ಯಗಳಿಗೂ ನಮಗೂ ಬಹಳ ವ್ಯತ್ಯಾಸವಿದೆ. ಒಂದು ಮೀಟರ್ಗೆ ನಮ್ಮಲ್ಲಿ 8,160 ರೂ. ತೆಗೆದುಕೊಳ್ಳುತ್ತಾರೆ. ನಮ್ಮಲ್ಲಿ ತಿಂಗಳಿಗೆ ಕೊಡುವ ದರ ಹತ್ತು ವರ್ಷಗಳಿಗೆ ಲೆಕ್ಕ ಹಾಕಿದರೆ ಪ್ರತೀ ಮೀಟರ್ಗೆ 17 ಸಾವಿರ ರೂ. ಆಗಲಿದೆ. ಬೇರೆ ರಾಜ್ಯಗಳಲ್ಲಿ 7,400 ರೂ.ಯಿಂದ 9,260 ಆಗಲಿದೆ. ಸ್ಮಾರ್ಟ್ ಮೀಟರ್ ದರ, ಸಾಫ್ಟ್ವೇರ್ ನಿರ್ವಹಣೆ ದರ ಹಾಗೂ ಸಿಬ್ಬಂದಿ ವೇತನ ದರಗಳನ್ನು ಸೇರಿಸಿ ಹತ್ತು ವರ್ಷಕ್ಕೆ ಜನರಿಂದ ಸಂಗ್ರಹ ಮಾಡುತ್ತಿದ್ದಾರೆ ಎಂದರು.
ಸ್ಮಾರ್ಟ್ ಮೀಟರ್ಗೆ ಗ್ಲೋಬಲ್ ಟೆಂಡರ್ ಕರೆಯಬೇಕಿತ್ತು. ಆದರೆ ಇವರು ಕರೆದಿಲ್ಲ. ಭಂಡತನದಿಂದ ಕಣ್ಮುಂದೆ ಸುಳ್ಳು ಹೇಳಿ ಅವ್ಯವಹಾರ ಮಾಡಿದ್ದಾರೆ. ರಾಜಶ್ರೀ, ಸಹ್ಯಾದ್ರಿ ಹಾಗೂ ವಿಆರ್ ಪಾಟೀಲ್ ಕಂಪನಿಗಳು ಬಿಡ್ ಹಾಕಿದ್ದವು. ಇವರ ಟೆಂಡರ್ ದಾಖಲೆ ಪ್ರಕಾರ ಒಂದೇ ಒಂದು ಕಂಪನಿ ಅರ್ಹವಾಗಿದ್ದು, ಅದೇ ರಾಜಶ್ರೀ ಕಂಪನಿ ಎಂದಿದ್ದಾರೆ.
ನಾವು ರಾಜಕೀಯ ಪ್ರೇರಿತ ಆರೋಪ ಮಾಡುತ್ತಿಲ್ಲ. ಸತ್ಯ ಹೇಳಿದ್ದೀವಿ. ಸರ್ಕಾರ ಎಚ್ಚೆತ್ತುಕೊಳ್ಳಬೇಕು, ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಾವು ಬಿಸಿ ಮುಟ್ಟಿಸಬೇಕಾಗುತ್ತದೆ. ಹಗಲು ದರೋಡೆ ನಿಲ್ಲಿಸಬೇಕು, ಈಗ ಆಗಿರುವ ಟೆಂಡರ್ ರದ್ದು ಮಾಡಬೇಕು. ಮತ್ತೆ ನಿಯಮಾನುಸಾರ ಟೆಂಡರ್ ಕರೆಯಲಿ ಎಂದು ಆಗ್ರಹಿಸಿದರು.
ಕೆಟಿಪಿಪಿ ಕಾಯ್ದೆ ಪ್ರಕಾರ ಸ್ಮಾರ್ಟ್ ಮೀಟರ್ ಟೆಂಡರ್ ಕೊಟ್ಟಿಲ್ಲ. ಇದು ಜಿಟಿಪಿಪಿ ಕಾಯ್ದೆ, ಜಾರ್ಜ್ ಟ್ರಾನ್ಪರೆನ್ಸಿ ಇನ್ ಪಬ್ಲಿಕ್ ಪ್ರೊಕ್ಯೂರ್ಮೆಂಟ್ ಪ್ರೊಸೀಜರ್ ಕಾಯ್ದೆ. ಟೆಂಡರ್ ನಿಯಮಗಳನ್ನು ತಮಗೆ ಬೇಕಾದಂತೆ ರೂಪಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...