NEWSಕೃಷಿನಮ್ಮರಾಜ್ಯ

ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ: ಸಚಿವ ಈಶ್ವರ್ ಖಂಡ್ರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ (National Forest Martyrs Day) ಕಾರ್ಯಕ್ರಮದಲ್ಲಿ ಮಾತನಾಡಿದರು.

ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ 62 ಮಂದಿ ಹುತಾತ್ಮರಾಗಿದ್ದು,ಈ ಹುತಾತ್ಮರಾದವರ ಕುಟುಂಬಗಳಿಗೆ 50 ಲಕ್ಷ ರೂ. ಪರಿಹಾರ ನೀಡಲಿದ್ದೇವೆ ಎಂದರು.

ಇನ್ನು ಈಗ ಹವಾಮಾನ ಬದಲಾವಣೆ ದೊಡ್ಡ ಮಟ್ಟದ ಸಮಸ್ಯೆಯಾಗುತ್ತಿದೆ. ಏಕಾಏಕಿ ಮೇಘಸ್ಫೋಟ, ಅತಿಯಾದ ಮಳೆ ಬರುತ್ತಿದೆ. ಮನುಕುಲವೇ ನಾಶವಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಕರ್ನಾಟಕವೂ ಕೂಡ ಡೇಂಜರ್ ಝೋನ್‌ನಲ್ಲಿದೆ. ಭೂ ಕುಸಿತ ಸಂಭವಿಸುತ್ತಿದೆ. ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಇದಕ್ಕೆ ಪರಿಹಾರ ಎಂದರು.

ರಾಜ್ಯದಲ್ಲಿ ಸಂಪತ್ಭರಿತ ಅರಣ್ಯವಿದೆ. ಪಶ್ಚಿಮ ಘಟ್ಟದಲ್ಲಿ ವಿವಿಧ ಪ್ರಭೇದಗಳ ಜೀವ ವೈವಿಧ್ಯ ತಾಣಗಳು ಇವೆ. ಮಳೆ ಮಾರುತವನ್ನು ಬದಲಾವಣೆ ಮಾಡಿ, ಮಳೆಯನ್ನು ತರಿಸುವ ಶಕ್ತಿ ಪಶ್ಚಿಮ ಘಟ್ಟಗಳಿಗೆ ಇದೆ. ಆದರೆ ಇಲ್ಲಿ 2 ಲಕ್ಷ ಎಕರೆ ಭೂಮಿಯ ಒತ್ತುವರಿಯಾಗಿದೆ. ಮೂವತ್ತು- ನಲವತ್ತು ಸಾವಿರ ಎಕರೆ ಭೂಮಿಯನ್ನು ಮರುವಶಪಡಿಸಿಕೊಂಡು ಸಂರಕ್ಷಿತ ತಾಣ ಅಂತಾ ಘೋಷಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಐದು ಹುಲಿಗಳು ಮೃತಪಟ್ಟಿದ್ದು ಬಹಳ ನೋವಾಗಿತ್ತು. ಸಿಎಂ ಕೂಡ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಅರಣ್ಯ ಭೂಮಿ ಕಡಿಮೆ ಇದೆ. ಹೀಗಾಗಿ ಈ ವ್ಯವಸ್ಥೆ ಬಗ್ಗೆಯೂ ಅಧ್ಯಯನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!