NEWSಕೃಷಿರಾಜಕೀಯ

ಆರ್‌ಟಿಸಿ ದರ ಏರಿಕೆ ಗುತ್ತಿಗೆದಾರರ ಮರ್ಜಿನಲ್ಲಿ ಸರ್ಕಾರ : ಬರಡನಪುರ ನಾಗರಾಜ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರೈತರ ಹಿತ ಕಾಪಾಡುವ ಬದಲು ಸರ್ಕಾರ ಕಾರ್ಪೊರೇಟ್ ಕಂಪನಿಗಳ ಹಾಗೂ ಮಧ್ಯವರ್ತಿಗಳ ಲಾಬಿಗೆ ಮಣಿದು ಆರ್‌ಟಿಸಿ ಯ ಬೆಲೆಯನ್ನು 15 ರೂಪಾಯಿಗಳಿಂದ 25 ರೂ.ಗೆ ಏರಿಕೆ ಮಾಡಿ ರೈತರಿಗೆ ಗಾಯದ ಮೇಲೆ ಬರೆ ಹಾಕಲು ಹೊರಟಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು – ಚಾಮರಾಜನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಕಿಡಿಕಾರಿದ್ದಾರೆ.

ಒಂದು ಆರ್‌ಟಿಸಿಯನ್ನು ತೆಗೆಯಲು ಕೇವಲ ರೂ. 5 ಖರ್ಚಾಗುತ್ತದೆ ಈಗಾಗಲೇ 15 ರೂಪಾಯಿ ಪಡೆಯುತ್ತಿದ್ದ ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಸಹಕಾರಿಯಾಗುವಂತೆ ದರ ಏರಿಕೆ ಮಾಡಿದೆ.

ಒಂದೇ ಸಲ 10 ರೂಪಾಯಿ ಏರಿಕೆ ಮಾಡಿ ಮತ್ತಷ್ಟು ಬೆಲೆ ಏರಿಕೆಯಿಂದ ರಾಜ್ಯದ ರೈತರಿಗೆ ಸಮಸ್ಯೆ ತಂದೊಡ್ಡಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಈಗಾಗಲೇ ಕೊರೊನಾ ಸಂಕಷ್ಟ ಹಾಗೂ ಅತಿವೃಷ್ಟಿ ಅನಾವೃಷ್ಟಿಯಿಂದ ಕಳೆದ ಮೂರು ವರ್ಷಗಳಿಂದ ಕಷ್ಟ ಅನುಭವಿಸಿದ್ದಾರೆ. ಈ ಮಧ್ಯೆ ಇದರ ಬೆಲೆಯನ್ನು ಏರಿಕೆ ಮಾಡಿರುವುದು ಖಂಡನೀಯ ಈ ಕೂಡಲೇ ಸರ್ಕಾರ ಹತ್ತು ರೂಪಾಯಿಗೆ ಇಳಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...