
ಬೆಂಗಳೂರು: ನಮ್ಮ ಮನವಿಗೆ ಸ್ಪಂದಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ ಪ್ರತಿ ತಿಂಗಳ ಒಂದನೇ ತಾರೀಖಿನಂದು ವೇತನ ಪಾವತಿ ಮಾಡಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶ ಮಾಡಿರುವುದು ಖುಷಿಯ ವಿಷಯ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸಂಘದಿಂದ ಇದು ಒಂದು ಒಳ್ಳೆಯ ಕೆಲಸವಾಗಿದೆ ಕಳೆದ 4ರ ನವೆಂಬರ್ 2024ರಲ್ಲಿ ಸಂಘದ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮತ್ತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಒಂದನೇ ತಾರೀಖಿಗೆ ವೇತನ ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದೆವು. ಅದರ ಪ್ರತಿಫಲವಾಗಿ ಸಾರಿಗೆ ಸಚಿವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ ಎಂದರು.
ಇನ್ನು ಈ ಸಂಬಂಧ ಈಗಾಗಲೇ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಅವರು ಫೆಬ್ರವರಿ ತಿಂಗಳ ವೇತನವನ್ನು ಮಾರ್ಚ್ 1ರಂದೆ ಕೊಡುವುದಕ್ಕೆ ಆದೇಶ ಮಾಡಿದ್ದು, ಈಗಾಗಲೇ ಸಂಸ್ಥೆಯ ಕಚೇರಿ ಸಿಬ್ಬಂದಿಗಳು ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ.
ಹೀಗಾಗಿ BMTC, KKRTC, NWKRTC ಸಂಸ್ಥೆಯ ನೌಕರರಿಗೆ ಕೆಎಸ್ಆರ್ಟಿಸಿ ನಿಗಮದ ನೌಕರರಂತೆ ಇನ್ನು ಮುಂದೆ ಪ್ರತಿ ತಿಂಗಳು 1ನೇ ತಾರೀಖಿನಂದು ವೇತನ ಪಾವತಿಯಾಗಲಿದೆ.
