Please assign a menu to the primary menu location under menu

NEWSನಮ್ಮರಾಜ್ಯಸಿನಿಪಥ

ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ (52) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಅಪಾರ್ಟ್‌ಮೆಂಟ್‌ನ ಅಕ್ಕಪಕ್ಕದ ನಿವಾಸಿಗಳಿಗೆ  ವಾಸನೆ ಬರುತ್ತಿತ್ತು.

ಹೀಗಾಗಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಅವರ ಮನೆಬಳಿ ಹೋಗಿ ಗಮನಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು   ಬೆಳಕಿಗೆ ಬಂದಿದೆ. 2006ರಲ್ಲಿ ಮಠ, ಎದ್ದೇಳು ಮಂಜುನಾಥ ಸಿನಿಮಾ ಮೂಲಕ ನಿರ್ದೇಶಕರಾಗಿ ಹೆಚ್ಚು ಹೆಸರು ಮಾಡಿದ್ದರು.

ಇದು ಆತ್ಮಹತ್ಯೆಯೋ ಇಲ್ಲ ಕೊನೆಯೋ ಎಂಬ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತ ನಟ, ನಿರ್ದೇಶಕ ಗುರುಪ್ರಸಾದ್‌ ಅವರು ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡಿದ್ದಾರೆ. ಅಲ್ಲದೆ ಒಬ್ಬ ಒಳ್ಳೆ ನಿರ್ದೇಶಕರನ್ನು ಕಳೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಗುರುಪ್ರಸಾದ್ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. ‘ಮಠ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಗುರುಪ್ರಸಾದ್ ಮೊದಲ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದರು.

ಅದಾದ ಬಳಿಕ ನಿರ್ದೇಶಿಸಿದ ‘ಎದ್ದೇಳು ಮಂಜುನಾಥ’ ಭಾರಿ ದೊಡ್ಡ ಹಿಟ್ ಆಯ್ತು, ಕಲ್ಟ್ ಕಾಮಿಡಿ ಸಿನಿಮಾ ಆಗಿ ಗುರುತಿಸಲಾಗುತ್ತಿದೆ. ಅದಾದ ಬಳಿಕ ‘ಡೈರೆಕ್ಟರ್ಸ್ ಸ್ಪೆಷಲ್’ ಸಿನಿಮಾ ಮಾಡಿದರು.

ಈ ಸಿನಿಮಾ ಮೂಲಕ ಡಾಲಿ ಧನಂಜಯ್ ನಾಯಕನಾಗಿ ಪರಿಚಯಗೊಂಡರು. ಅದಾದ ಬಳಿಕ 2017 ರಲ್ಲಿ ‘ಎರಡನೇ ಸಲ’ ನಿರ್ದೇಶಿಸಿದರು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು.

‘ಎರಡನೇ ಸಲ’ ಸಿನಿಮಾ ಆದಮೇಲೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದ ಗುರುಪ್ರಸಾದ್ ಇದೇ ವರ್ಷದಲ್ಲಿ ಜಗ್ಗೇಶ್ ಅವರೊಟ್ಟಿಗೆ ‘ರಂಗನಾಯಕ’ ಸಿನಿಮಾ ಮಾಡಿದರು. ಸಿನಿಮಾ ಚಿತ್ರಮಂದಿರದಲ್ಲಿ ಅಟ್ಟರ್ ಫ್ಲಾಪ್ ಆಯ್ತು.

‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ಕೊನೆಗೆ ಈಗ ನಿಧನ ಹೊಂದಿದ್ದಾರೆ.

ಕೌಟುಂಬಿಕ ಕಲಹಗಳ ಕಾರಣದಿಂದಾಗಿ ಗುರುಪ್ರಸಾದ್ ಅವರ ಮೊದಲ ಮದುವೆ ಮುರಿದು ಬಿದ್ದಿತ್ತು, ಕೆಲ ತಿಂಗಳ ಹಿಂದಷ್ಟೆ ಅವರು ಎರಡನೇ ಮದುವೆ ಆಗಿದ್ದರು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್