ಚಿಕಿತ್ಸೆಗಾಗಿ ಸ್ಯಾಂಡಲ್ವುಡ್ ನಿರ್ದೇಶಕ ಎಸ್. ಮುರಳಿ ಮೋಹನ್ ಪರದಾಟ: ನೆರವಿಗಾಗಿ ಬಹಿರಂಗ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ಬೆಳವಣಿಗೆಗೆ ಹಲವರ ಕೊಡುಗೆ ಇದೆ. ಅಂಥವರ ಸಾಲಿನಲ್ಲಿ ನಿಲ್ಲಲು ಯೋಗ್ಯರಾಗಿರುವ ಡಾ. ಶಿವರಾಜ್ ಕುಮಾರ್ ನಟನೆಯ ‘ಸಂತ’, ಉಪೇಂದ್ರ ನಟನೆಯ ‘ನಾಗರಹಾವು’ ಸಿನಿಮಾಗಳ ನಿರ್ದೇಶಕ ಎಸ್. ಮುರಳಿ ಮೋಹನ್ ಅವರು ಈಗ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆಗಾಗಿ ಒಂದು ದೊಡ್ಡ ಮೊತ್ತದ ಹಣಕಾಸಿನ ಅಗತ್ಯವಿದ್ದು, ನೆರವಿಗಾಗಿ ಮನವಿ ಮಾಡಿದ್ದಾರೆ.
ನಟ, ನಿರ್ದೇಶಕ ಉಪೇಂದ್ರ ಅವರ ಆಪ್ತರೂ ಆಗಿರುವ ಎಸ್.ಮುರಳಿ ಮೋಹನ್ ಸಿನಿಮಾ ನಿರ್ದೇಶನದ ಜತೆಗೆ ಹಲವಾರು ಸಿನಿಮಾಗಳಿಗೆ ಕತೆಗಾರ, ಸಂಭಾಷಣೆಕಾರ ಮತ್ತು ಗೀತ ರಚನೆಕಾರರಾಗಿಯೂ ಕೆಲಸ ಮಾಡಿದ್ದಾರೆ. ಈಗ ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿದ್ದು, ಈಗ ಅವರಿಗೆ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳ ಅಗತ್ಯವಿದೆ.
ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ನಿರ್ದೇಶಕ ಎಸ್.ಮುರಳಿ ಮೋಹನ್, ‘ನಾನು ಕಳೆದ 36 ವರ್ಷಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ನಿರ್ದೇಶಕನಾಗಿ, ಸಂಭಾಷಣೆಕಾರನಾಗಿ, ಗೀತ ರಚನೆಕಾರನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ 2018 ರಿಂದಲೂ ಆರೋಗ್ಯ ಸಮಸ್ಯೆ ಇದೆ.
ಮೂತ್ರಪಿಂಡ ವೈಫಲ್ಯ ಉಂಟಾಗಿದ್ದು, ವಾರಕ್ಕೆ ಮೂರು ದಿನ ಡಯಾಲಿಸಿಸ್ ಮಾಡಿಸುತ್ತಿದ್ದೇನೆ. 2020ರಲ್ಲಿ ನಾನು ಮೂತ್ರಪಿಂಡಕ್ಕಾಗಿ ಅಂಗಾಂಗ ಕಸಿ ಕಾರ್ಯಕ್ರಮ ಜೀವನಸಾರ್ಥಕತೆಯಲ್ಲಿ ನೋಂದಣಿ ಮಾಡಿಸಿದ್ದೇನೆ. ಈಗ ನನಗೆ ಮೂತ್ರಪಿಂಡ ಕಸಿ ಮಾಡಿಸುವ ಸಮಯ ಬಂದಿದೆ. ಬೆಂಗಳೂರಿನ ಜೆ.ಸಿ. ನಗರದಲ್ಲಿರುವ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಈ ಶಸ್ತ್ರಚಿಕಿತ್ಸೆಗೆ 25 ಲಕ್ಷ ರೂ.ಗಳ ಅವಶ್ಯವಿದೆ. ನಾನು ಈಗಾಗಲೇ ಹೃದಯ ಶಸ್ತ್ರಚಿಕಿತ್ಸೆ ಸೇರಿ ಇತರೆ ಚಿಕಿತ್ಸೆಗಳು ಮಾಡಿಸಿಕೊಂಡಿರುವ ಕಾರಣ ಆರ್ಥಿಕವಾಗಿ ಸಂಕಷ್ಟದಲ್ಲಿದ್ದೇನೆ. ತಾವುಗಳು ದಯಮಾಡಿ ನನಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಧನ ಸಹಾಯ ಮಾಡಬೇಕಾಗಿ ತಮ್ಮಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ಬರೆದು ತಮ್ಮ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ್ದಾರೆ.
ಮುರಳಿ ಮೋಹನ್ ಅವರು ಕನ್ನಡದ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ನಟ ಉಪೇಂದ್ರ ಅವರ ಆಪ್ತರಾಗಿದ್ದ ಮುರಳಿ ಮೋಹನ್, ‘ಓಂ’ ಸೇರಿದಂತೆ ಆರಂಭದ ಅವರ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ, ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದಾರೆ. ಈಗ ಗಂಭೀರ ಆರೋಗ್ಯ ಸಮಸ್ಯೆಯಿಂದ ಮುರಳಿ ಬಳಲುತ್ತಿದ್ದು ಚಿಕಿತ್ಸೆಗಾಗಿ ನೆರವಿನ ಬಾಗಿಲು ಕಾಯುತ್ತಿದ್ದಾರೆ.
ಮುರಳಿ ಅವರ ಚಿಕಿತ್ಸೆಗೆ ನೆರವಾಗುವವರು ಈ ಕೆಳಗೆ ಕೊಟ್ಟಿರುವ ಬ್ಯಾಂಕ್ ಖಾತೆ ಅಥವಾ ಸ್ಕಾನರ್ ಮೂಲಕ ಹಣ ವರ್ಗಾಯಿಸಬಹುದು
UCO Bank .. (KR Road Branch)
Name: Murali S
Ac number: 1641011025178
IFSC: UCBA0001641
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...