CrimeNEWSದೇಶ-ವಿದೇಶನಮ್ಮರಾಜ್ಯ

ಗುಜರಾತ್‌ನ ಅಹಮ್ಮದಾಬಾದ್‌ ಬಳಿ ಕೊನೆಗೂ ಸಿಕ್ಕಿ ಬಿದ್ದ ಹುಡುಗಿಯರ ಸಪ್ಲೈ ಆರೋಪಿ ಸ್ಯಾಂಟ್ರೋ ರವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನ ಅಹಮ್ಮದಾಬಾದ್ ಸಮೀಪದ ಬಂಧಿಸಿದ್ದಾರೆ.

ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ರವಿಯ ಎರಡನೇ ಪತ್ನಿ ನೀಡಿದ್ದ ದೂರಿನ ಆಧಾರದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ರವಿ ಬಂಧಿಸುವಲ್ಲಿ ಯಸ್ವಿಯಾಗಿದ್ದಾರೆ ಎಂದು ಬಂಧನದ ಬಳಿಕ ಎಡಿಜಿಪಿ ಅಲೋಕ್ ಕುಮಾರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ವಿಗ್ ಕಳಚಿದ್ದ. ಶೇವ್ ಮಾಡಿಕೊಂಡು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದಿಂದ ಗುಜರಾತ್ ಪ್ರವೇಶ ಮಾಡಿದ್ದ. ಈ ಕುರಿತು ಸುಳಿವು ಪಡೆದ ಮೈಸೂರು ಪೊಲೀಸರು, ಗುಜರಾತ್ ಪೊಲೀಸರ ನೆರವು ಪಡೆದು ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆ ಎಂದು ಎಡಿಜಿಪಿ ಮಾಹಿತಿ ನೀಡಿದರು.

ಸ್ಯಾಂಟ್ರೋ ರವಿ ತಲೆಮರೆಸಿಕೊಳ್ಳಲು ದಿನಕ್ಕೊಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಎಲ್ಲಿಯೂ ಯಾವುದೇ ಅನುಮಾನ ಬರದಂತೆ ನೋಡಿಕೊಳ್ಳುತ್ತಿದ್ದ. ತನ್ನ ಕಾರಿನ ಜಾಡು ಹಿಡಿದು ಬಂಧಿಸುವ ಸಾಧ್ಯತೆ ಅರಿತಿದ್ದ ಕಾರಣ ಕಾರು ಬದಲಿಸುತ್ತಿದ್ದ. ಇಷ್ಟೇ ಅಲ್ಲ ಪ್ರತಿ ದಿನ ಒಂದೊಂದು ಸಿಮ್ ಕಾರ್ಡ್ ಬಳಕೆ ಮಾಡುತ್ತಿದ್ದ.

ಹೀಗಾಗಿ ಸ್ಯಾಂಟ್ರೋ ರವಿಯನ್ನು ಕರೆ ಮೂಲಕ, ಸ್ಯಾಟಲೈಟ್ ಲೋಕೇಶನ್ ಟ್ರೇಸ್ ಮಾಡುವುದು ಕೂಡ ಪೊಲೀಸರಿಗೆ ಸವಾಲಾಗಿತ್ತು. ಇಷ್ಟು ಮಾತ್ರವಲ್ಲ, ದಿನಕ್ಕೊಂದು ರಾಜ್ಯಕ್ಕೆ ತೆರಳುತ್ತಿದ್ದ. ಹೀಗಾಗಿ ಪೊಲೀಸರು ಒಂದು ರಾಜ್ಯದಲ್ಲಿ ಸುಳಿವು ಹಿಡಿದು ಆ ರಾಜ್ಯಕ್ಕೆ ತೆರಳಿದಾಗ ನಿರಾಸೆಯಾಗುತ್ತಿತ್ತು. ಸ್ಯಾಂಟ್ರೋ ರವಿಗೆ ಹೇಗೆ ಪರಾರಿಯಾಗಬೇಕು ಅನ್ನೋದು ಗೊತ್ತಿತ್ತು ಎಂದು ಅಲೋಕ್ ಕುಮಾರ್ ಹೇಳಿದರು.

ರಾಯಚೂರು ಎಸ್‌ಪಿ ನಿನ್ನೆ ಸ್ಯಾಂಟ್ರೋ ರವಿ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದರು. ಈ ಸುಳಿವು ಆಧರಿಸಿ ಗುಜರಾತ್‌ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಗುಜರಾತ್ ಕೋರ್ಟ್‌ಗೆ ಸ್ಯಾಂಟ್ರೋ ರವಿಯನ್ನು ಹಾಜರು ಪಡಿಸಲಾಗುತ್ತದೆ. ಕೋರ್ಟ್‌ನಿಂದ ಟ್ರಾನ್ಸಿಸ್ಟ್ ಆರ್ಡರ್ ಪಡೆದ ಬಳಿಕ ಬೆಂಗಳೂರಿಗೆ ಕರೆ ತರಲಾಗುತ್ತದೆ ಎಂದು ಅಲೋಕ್ ಕುಮಾರ್ ವಿವರಿಸಿದರು.

ಸ್ಯಾಂಟ್ರೋ ರವಿ, ಕೇರಳ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಓಡಾಡಿದ್ದ. ರವಿ ಬಂಧನದಲ್ಲಿ ಮೈಸೂರು ಪೊಲೀಸರ ಜತೆಗೆ ಮಂಡ್ಯ. ರಾಮನಗರ, ರಾಯಚೂರು ಎಸ್‌ಪಿ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ ಪೊಲೀಸರಿಗೆ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು.

ಸ್ಯಾಂಟ್ರೋ ರವಿ ಮೇಲೆ 28 ಪ್ರಕರಣಗಳಿವೆ. ಅದರಲ್ಲಿ ಯಾವ ಪ್ರಕರಣಕ್ಕೆ ಚಾರ್ಜ್‌ಶೀಟ್ ಆಗಿದೆ, ಯಾವ ಪ್ರಕರಣಕ್ಕೆ ಆಗಿಲ್ಲ ಅನ್ನೋದು ಪರಿಶೀಲಿಸುತ್ತೇವೆ. ಸದ್ಯ 2ನೇ ಪತ್ನಿ ನೀಡಿದ ದೂರಿನ ಆಧಾರದಲ್ಲಿ ತನಿಖೆ ನಡೆಯಲಿದೆ. ಇದರ ಜತೆಗೆ ಹುಡುಗಿಯರ ಸಪ್ಲೈ ಸೇರಿದಂತೆ ಅನೈತಿಕ ದಂಧೆ ಕುರಿತು ವಿಚಾರಣೆಯೂ ನಡೆಯಲಿದೆ ಎಂದು ಹೇಳಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...