Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಆರಗ ಮನೆಯಲ್ಲಿ ಕಂತೆ-ಕಂತೆ ನೋಟುಗಳ ಲೆಕ್ಕ ಹಾಕುತ್ತಿರುವ ಸ್ಯಾಂಟ್ರೋ ರವಿ : ಮಾಜಿ ಸಿಎಂ ಎಚ್‌ಡಿಕೆ ಸಿಡಿಸಿದ ಹೊಸ ಬಾಂಬ್

214Views
ವಿಜಯಪಥ ಸಮಗ್ರ ಸುದ್ದಿ

ಬೀದರ್: ಗೃಹ ಸಚಿವ ಆರಗ ಜ್ಞಾ ನೇಂದ್ರ ಅವರ ಮನೆಯಲ್ಲಿ ಸ್ಯಾಂಟ್ರೋ ರವಿ ಹಣ ಲೆಕ್ಕ ಹಾಕುತ್ತಿದ್ದ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ರವಿ ಜತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.   ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಹೀಗಾಗಿ ಈ ಕುರಿತು ​ ಜಿಲ್ಲೆ ಬಸವಕಲ್ಯಾಣದಲ್ಲಿ ಇಂದು (ಜ.8) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.

ಸಚಿವ ಸೋಮಶೇಖರ್ ಜತೆ ಸ್ಯಾಂಟ್ರೋ ರವಿ ವರ್ಗಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಆ ವಿಡಿಯೋ ರೆಕಾರ್ಡ್ ನಾನು ಮಾಡಿಸಿದ್ದಾ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇಂತಹ ವಿಷಯ ಇಟ್ಟುಕೊಂಡು ರಾಜಕೀಯ ಮಾಡುವ ಕರ್ಮ ನನಗಿಲ್ಲ. ಸಿಎಂ ದಲ್ಲಾಳಿಗಳೇ ಆಡಳಿತ ನಡೆಸುವ ಸ್ಥಿತಿ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಕೃಪಾ ಹೊಸ ಕಟ್ಟಡದಲ್ಲಿ ಏನೆಲ್ಲಾ ನಡೆಯಿತು. ಉಸ್ತುವಾರಿ ಇದ್ದ ದೇವರಾಜನನ್ನು ಯಾಕೆ ಎತ್ತಂಗಡಿ ಮಾಡಿದರು? ಸಿಎಂ ಹೆಚ್ಚುವರಿ ಕಾರ್ಯದರ್ಶಿ ಜಗದೀಶ್ ಎತ್ತಂಗಡಿ ಯಾಕೆ ಆಯ್ತು? ಜಗದೀಶ್​​ಗೆ ಹೆಚ್ಚುವರಿ ಹೊಣೆ ಇತ್ತು, ಬೆಂಕಿ ಇಲ್ಲದೆ ಹೊಗೆ ಬರುತ್ತಾ?

ನಿಮ್ಮ ತಂದೆಯವರು ಹೇಳಿಕೊಟ್ಟಿದ್ದು ಇದೇನಾ ಬೊಮ್ಮಾಯಿ ಅವರೇ? ರಾಯಿಸ್ಟ್ ಎಸ್.ಆರ್.ಬೊಮ್ಮಾಯಿರಿಂದ ಸಿಎಂ ಕಲಿತದ್ದು ಇದೇನಾ? ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಇದೆಲ್ಲಾ ಅಸಹ್ಯ ನಡೆದಿದೆ. ಇದೇನಾ ನಿಮ್ಮ ತಂದೆಯವರಿಂದ ಕಲಿತದ್ದು ಎಂದು ಸಿಎಂ ಬೊಮ್ಮಾಯಿ ವಿರುದ್ಧ ಎಚ್‌ಡಿಕೆ ಕಿಡಿಕಾರಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...