NEWSಕೃಷಿದೇಶ-ವಿದೇಶನಮ್ಮರಾಜ್ಯ

ಫೆ.13ರಂದು ರೈತರಿಗೆ ನೀಡಿದ ಭರವಸೆ ಹುಸಿಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಚಲೋ: ಸಂಯುಕ್ತ ಕಿಸಾನ್ ಮೋರ್ಚಾ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರೈತರಿಗೆ ನೀಡಿದ ಭರವಸೆ ಹುಸಿಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರುವರಿ 13ರಂದು ದೆಹಲಿ ಚಲೋ ಆಂದೋಲನವನ್ನು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ದೇಶದ ವಿವಿಧ ರಾಜ್ಯಗಳ ನೂರಾರು ರೈತ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಇಂದು (ಜ.21) ದೆಹಲಿಯ ರಖಪ್‌ಚಂದ್ ಗುರುದ್ವಾರ ಸಭಾಂಗಣದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಆಯೋಜಿಸಿದ್ದ ರಾಷ್ಟ್ರೀಯ ರೈತ ಮುಖಂಡರ ಸಭೆಯಲ್ಲಿ ರೈತರ ದೆಹಲಿ ಚಲೋ ಆಂದೋಲನ ನಡೆಸಲು ತೀರ್ಮಾನಿಸಲಾಯಿತು ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಬೇಕು. ಡಾ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ದೇಶದ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಬೇಕು. ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರಬರಬೇಕು.

ಇವುಗಳಲ್ಲಿ ಪ್ರಮುಖವಾಗಿ ದೇಶಾದ್ಯಂತ 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10 ಸಾವಿರ ಪಿಂಚಣಿ ಯೋಜನೆ ಬರಬೇಕು ಎಂಬ ಒತ್ತಾಯಗಳ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರ ಕೈಗೊಳ್ಳದಿದ್ದರೆ ಫೆಬ್ರವರಿ 13ರಂದು ಎಲ್ಲ ರಾಜ್ಯಗಳಿಂದ ಲಕ್ಷಾಂತರ ರೈತರು ರ‍್ಯಾಲಿ ಮೂಲಕ ದೆಹಲಿ ಚಲೋ ಆಂದೋಲನ ನಡೆಸಲಿದ್ದೇವೆ ಎಂದರು.

ಫೆ.13ರಂದು ದೇಶದ ಎಲ್ಲ ರೈತ ಸಂಘಟನೆಗಳ ಮಹಾಸಂಗಮ ರ‍್ಯಾಲಿ ನಡೆಯಲಿದ್ದು, ಈಗಾಗಲೇ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶದ ವಿವಿಧ ರಾಜ್ಯಗಳಲ್ಲಿ 14 ಕಿಸಾನ್ ಮಹಾ ಪಂಚಾಯತ್ ಸಮಾವೇಶಗಳನ್ನು ನಡೆಸಿ ರೈತರ ಜಾಗೃತಿ ಪಡಿಸಲಾಗಿದೆ ಎಂದು ವಿವರಿಸಿದರು.

ಎಸ್.ಕೆ.ಎಂ (ರಾಜಕೀಯತರ ಮುಖಂಡರಾದ ಪಂಜಾಬ್‌ನ ಜಗಜಿತ್ ಸಿಂಗ್ ದಲೈವಾಲ್, ಮಧ್ಯಪ್ರದೇಶದ ಶಿವಕುಮಾರ್ ಕಕ್ಕ, ಹರಿಯಾಣದ ಅಭಿಮನ್ಯುಕೊಹರ್, ಬಿಹಾರದ ಅರುಣ್ ಸಿನ್ಹಾ, ಉತ್ತರ ಪ್ರದೇಶದ ಹರ್ಪಲ್ ಬಿಲಾರಿ, ಲಕ್ವೀನ್ದಂದರ್ ಸಿಂಗ್, ಜರ್ರನಲ್ ಸಿಂಗ್ , ಶಿರಸಾ ಸಿಂಗ್, ಇನ್ನು ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ ಕುಸಿದು ಬಿದ್ದ ಶಾಲಾ ಕಟ್ಟಡ: 22 ಮಕ್ಕಳು ಸಾವು- 132 ಮಕ್ಕಳ ರಕ್ಷಣೆ