CrimeNEWSನಮ್ಮರಾಜ್ಯ

ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಾ.ರಾ ಮಹೇಶ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಅವರಿಂದು 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಾರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ಸಿಂಧೂರಿ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ತಿಳಿಸಿದರು.

ನಾನು ಬೇಕಿದ್ದರೆ ರಾಜಕಾರಣ ಬಿಡುತ್ತೇನೆಯೇ ಹೊರತು ಇಂತಹ ಗೋಮುಖಗಳ ಮುಖವಾಡ ಕಳಚುವುದನ್ನು ಬಿಡುವುದಿಲ್ಲ. ಕಷ್ಟಪಟ್ಟು ಬೆಳೆದ ನನಗೆ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೆಸರು ಎರಚಿದರು ಎಂದು ಕಿಡಿಕಾರಿದರು.

ಇನ್ನು ನನಗೆ ಆದ ಅನ್ಯಾಯದ ವಿರುದ್ಧ ನ್ಯಾಯ ಸಿಗುವವರೆಗೂ ಹೋರಾಡುತ್ತೇನೆ. ರಾಜಕಾರಣದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಆದರೆ ಎಲ್ಲರೂ ಭ್ರಷ್ಟರಲ್ಲ. ಇವರು ಎಲ್ಲರನ್ನೂ ಭ್ರಷ್ಟರೆಂದು ಬಿಂಬಿಸಲು ಯತ್ನಿಸುತ್ತಾರೆ. ಇಂಥವರ ಮುಖವಾಡ ಕಳಚುತ್ತೇನೆ ಎಂದು ಸವಾಲು ಹಾಕಿದರು.

ಸಾರಾ ಮಹೇಶ್ ಅವರ ಪರ ವಕೀಲಅರುಣ್ ಕುಮಾರ್ ಮಾತನಾಡಿ, 2ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ಜಾರಿಯಾಗಿದೆ. ಅಕ್ಟೋಬರ್ 20 ರೊಳಗೆ ರೋಹಿಣಿ ಸಿಂಧೂರಿ ಉತ್ತರ ಕೊಡಬೇಕು ಎಂದು ಹೇಳಿದರು.

ಇನ್ನು ಮಾನನಷ್ಟ ಮೊಕದ್ದಮೆ ಹೂಡುವ ಮುನ್ನಾ ರೋಹಿಣಿ ಸಿಂಧೂರಿ ಅವರಿಗೆ ಲೀಗಲ್ ನೋಟಿಸ್ ಕೊಟ್ಟಿದ್ದೆವು. ನೋಟಿಸ್‌ಗೆ ರೋಹಿಣಿ ಸಿಂಧೂರಿ ಅವರು ಉತ್ತರ ಕೊಟ್ಟಿದ್ದು, ಸಾರಾ ಮಹೇಶ್ ವಿರುದ್ಧ ಮಾತನಾಡಿರೋ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಇದು ಖಾಸಗಿ ಸಂಭಾಷಣೆ ಎಂದು ಹೇಳಿದ್ದಾರೆ. ಇದೇ ಉತ್ತರದ ಆಧಾರದ ಮೇಲೆ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ