NEWSನಮ್ಮಜಿಲ್ಲೆನಮ್ಮರಾಜ್ಯ

ಎಎಪಿಯಿಂದ ಸೀರೆ ಕುಚ್ಚು ತರಬೇತಿ : ಪ್ರಯೋಜನ ಪಡೆದ ನೂರಾರು ಮಹಿಳೆಯರು

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ರಾಮರಾಜ್ಯ ನಿರ್ಮಾಣ ಪರಿಕಲ್ಪನೆಯಲ್ಲಿ ಮಹಿಳೆಯ ಸ್ವಾವಲಂಬನೆ ಮುಖ್ಯವಾಗಿದ್ದು, ಆಮ್ ಆದ್ಮಿ ಪಕ್ಷದ ವತಿಯಿಂದ ಮಹಿಳೆಯರಿಗೆ ಉಚಿತ ಸೀರೆ ಕುಚ್ಚು ಹಾಕುವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶಾದ್ಯಂತ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನ ಸಂಭ್ರಮ ಇರುವ ಸಂದರ್ಭದಲ್ಲೇ, ಆಮ್ ಆದ್ಮಿ ಪಕ್ಷ ಮಹಿಳೆಯರ ಸ್ವಾವಲಂಬನೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ನಗರದ ಆಮ್ ಆದ್ಮಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಇಂದು ಒಂದು ದಿನದ ಸೀರೆ ಕುಚ್ಚು ಹಾಕುವ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾ ರಾಕೇಶ್ ಅವರ ನೇತೃತ್ವದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ ನಡೆದಿದ್ದು, ನೂರಾರು ಮಹಿಳೆಯರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು.

ಉದ್ಯೋಗಕ್ಕೆ ಅಗತ್ಯ ಕೌಶಲ್ಯಗಳ ಅಭಿವೃದ್ಧಿಪಡಿಸಿ ಹೇಗೆ ಹಣ ಸಂಪಾದನೆ ಮಾಡಿಕೊಳ್ಳಬಹುದೆಂದು ತರಬೇತಿಯಲ್ಲಿ ಮಾಹಿತಿ ನೀಡಲಾಯಿತು. ಇದು ಗೃಹಿಣಿಯರಿಗೆ, ವಿದ್ಯಾರ್ಥಿನಿಯರಿಗೆ ಸಂಪಾದನೆಗೆ ಸಂಪಾದನೆಯ ಮಾರ್ಗವಾಗಲಿದ್ದು, ಆರ್ಥಿಕ ಸ್ವಾವಂಬನೆ ಹೊಂದಬಹುದಾಗಿದೆ.

ಮಹಿಳೆಯರಿಗೆ ಎಲ್ಲ ರಂಗದಲ್ಲಿ ಪ್ರಾತಿನಿಧ್ಯ ಸಿಗಬೇಕು ಎನ್ನುವುದು ಆಮ್ ಆದ್ಮಿ ಪಕ್ಷದ ಧ್ಯೇಯವಾಗಿದ್ದು, ಅದಕ್ಕೆ ತಕ್ಕಂತೆ ಮಹಿಳಾ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ದೆಹಲಿ, ಪಂಜಾಬ್‌ನಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಆಮ್ ಆದ್ಮಿ ಪಕ್ಷ, ಈಗ ರಾಜ್ಯದಲ್ಲೂ ಅದೇ ರೀತಿಯ ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಮಹಿಳಾ ಸಂಘಟನೆ, ಸ್ವಾವಲಂಬನೆಗೆ ಸಹಾಯ ಮಾಡುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ