NEWSನಮ್ಮಜಿಲ್ಲೆ

ಹಿಟ್ನೇಹೆಬ್ಬಾಗಿಲು ಗ್ರಾಪಂ ಅಧ್ಯಕ್ಷರಾಗಿ ಸರೋಜಮ್ಮ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಹಿಟ್ನೇಹೆಬ್ಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸರೋಜಮ್ಮ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದೆ ಅಧ್ಯಕ್ಷರಾಗಿದ್ದ ಛಾಯಾಮಣಿ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸರೋಜಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಟ್ಟಾರೆ 19 ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 17 ಜನ ಕಾಂಗ್ರೆಸ್, 1ಜೆಡಿಎಸ್ ಹಾಗೂ 1 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಈ ಪಂಚಾಯಿತಿಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿಸುತ್ತಲೇ ಬಂದಿದೆ.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಿಟ್ನಳ್ಳಿ ಪರಮೇಶ್ ಮಾತನಾಡಿ, ತಾಲೂಕಿನಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದೊರಕುತ್ತಿರುವುದು ಮುಂದಿನ ಚುನಾವಣೆಗಳ ದಿಕ್ಸೂಚಿಯಾಗಿದೆ ಎಂದರು.

ಚುನಾವಣಾಧಿಕಾರಿಯಾಗಿ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ ಕಾರ್ಯನಿರ್ವಹಿಸಿದ್ದು, ಪಿಡಿಒ ನಾಗೇಂದ್ರ ಕುಮಾರ್, ಉಪಾಧ್ಯಕ್ಷೆ ಸುಧಾ ಶಿವಣ್ಣ, ಮಾಜಿ ಅಧ್ಯಕ್ಷೆ ಮೀನಾಕ್ಷಮ್ಮ ಬಸವಣ್ಣ, ಸದಸ್ಯರಾದ ಅನಿಲ್ ಕುಮಾರ್, ವಿಜಯಕುಮಾರ್, ಕಾಮರಾಜ್, ಎಚ್.ಎಸ್‌ಕುಮಾರ್, ವನಜಾಕ್ಷಮ್ಮ, ವರನಂದಿ, ಯಶೋದಮ್ಮ, ರವಿಕುಮಾರ್, ಸಾಕಮ್ಮ, ಮಂಜು ನಾಯ್ಕ, ಶಿವಕುಮಾರ್ ತಾಪಂ ಮಾಜಿ ಸದಸ್ಯ ರಾದ ಟಿ.ಈರಯ್ಯ, ಅಣ್ಣಯ್ಯ.

ಮುಖಂಡರಾದ ಹೊಲದಪ್ಪ, ಮಾಸ್ಟ್ರು ಮೋಹನ್, ಎಚ್.ಬಿ.ಶಿವರುದ್ರ, ಜಯಶಂಕರ್, ಈಚೂರ್ ಲೋಕೇಶ್, ದಿನೇಶ್, ಈರೇಗೌಡ, ತಮ್ಮಬೋವಿ, ಆರ್.ಎಸ್.ಮಹದೇವ್, ಶಿವಶಂಕರ್, ಪುಟ್ಟರಾಜ್, ಕುಮಾರ್, ಚಿಕ್ಕೇಗೌಡ, ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ