NEWSನಮ್ಮರಾಜ್ಯರಾಜಕೀಯ

ಸತೀಶ್ ಜಾರಕಿಹೊಳಿ ಸಿಎಂ ಆಗಲು ಎಚ್‌ಡಿಕೆ ಭೇಟಿ ಮಾಡಿದ್ದಾರೆ: ಜಿಟಿಡಿ ಹೊಸ್‌ ಬಾಂಬ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18 ಶಾಸಕರ ಬೆಂಬಲ ನೀಡುವಂತೆ ಅವರು ಕೇಳಿರಬಹುದು. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದ್ರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇನ್ನು ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ನಾನು ತಟಸ್ಥ ಅಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ, ಅದು ಬಿಜೆಪಿಯ ಆಂತರಿಕ ವಿಷಯ. ಅದರ ಬಗ್ಗೆ ನಾನು ಹೆಚ್ಚು ಮಾತನಾಡೋದಿಲ್ಲ. ಮುಂದೆ ಇನ್ನೂ ಏನೇನು ಬೆಳವಣಿಗೆ ಆಗುತ್ತೆ ಕಾದು ನೋಡೋಣ ಎಂದರು.

ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎನಿಸುತ್ತಿದೆ ಎಂದು ಸದನದಲ್ಲಿ ಸುನಿಲ್ ಕುಮಾರ್ ಹಾಗೂ ರಾಜಣ್ಣ ಈ ಹನಿಟ್ರ್ಯಾಪ್ ಪ್ರಕರಣದ ವಿಚಾರ ಮಾತನಾಡಿರುವುದಕ್ಕೆ ಅವರು ವ್ಯಂಗ್ಯವಾಡಿದರು.

ಸದನದಲ್ಲಿ ರಾಜ್ಯದ ಅಭಿವೃದ್ಧಿ ವಿಚಾರ ಚರ್ಚೆ ಆಗಬೇಕಿತ್ತು. ಕೇವಲ ಗಲಾಟೆ ಗದ್ದಲದಲ್ಲೇ ಸದನ ಮುಗಿಯಿತು. ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ರೆ ಜನ ಖುಷಿಯಾಗುತ್ತಿದ್ದರು ಎಂದು ಹೇಳಿದರು.

Deva
the authorDeva

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?