Wednesday, October 30, 2024
NEWSನಮ್ಮಜಿಲ್ಲೆಸಿನಿಪಥ

ಸತೀಶ್ ನೀನಾಸಂ- ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯದ ಮ್ಯಾಟ್ನಿ ಟ್ರೈಲರ್ ಬಿಡುಗಡೆ – ಸಾಥ್‌ ನಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಾಲಿ ಧನಂಜಯ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯದ ಮ್ಯಾಟ್ನಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮ್ಯಾಟಿ ಸಿನಿಮಾದ ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಷ್ಟು ದಿನಗಳ ಕಾಲ ತೆರೆ ಮೇಲೆ ಕ್ಯೂಟ್ ಹಾಗೂ ರೋಮ್ಯಾಂಟಿಕ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಸತೀಶ್ ನಿನಾಸಂ ಕೂಡ ಇದೆ ಮೊದಲ ಬಾರಿಗೆ ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಗಮನ ಸೆಳೆಯಲಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು ಸಿನಿಮಾದಲ್ಲಿ ಯಾರು ಡೆವಿಲ್ ಎನ್ನುವುದು ಇನ್ನಷ್ಟು ಕುತೂಹಲ ಮೂಡಿಸಿದೆ.

ಚಿತ್ರದಲ್ಲಿ ಸತೀಶ್, ರಚಿತಾ ರಾಮ್ ಸೇರಿದಂತೆ ಅದಿತಿ ಪ್ರಭುದೇವಾ, ಶಿವರಾಜ್ ಕೆಆರ್ ಪೇಟೆ, ನಾಗಭೂಷಣ್, ಪೂರ್ಣ ಮೈಸೂರು, ದಿಗಂತ್ ದಿವಾಕರ್, ತುಳಸಿ ಶಿವರಾಮ್ ತಬಲ ನಾಣಿ ಹೀಗೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ.

ಇನ್ನು ಮ್ಯಾಟ್ನಿ ಸಿನಿಮಾವನ್ನು ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು ಪಾರ್ವತಿ ಗೌಡ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ , ಸುಧಾಕರ್ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಾಹಣವಿದೆ.

ಇನ್ನು ಇದೇ ವೇಳೆ ಮಾತನಾಡಿದ ನೀನಾಸಂ ಸತೀಶ್, ಯಾಕೋ ಮ್ಯಾಟ್ನಿ ಸಿನಿಮಾ ಇನ್ನು ರಿಲೀಸ್ ಮಾಡಿಲ್ಲ ಮೊದಲು ರಿಲೀಸ್ ಮಾಡಿ ಎಂದು ದರ್ಶನ್ ಹೇಳಿದ್ದರು. ಆಗ ಟ್ರೈಲರ್ ಲಾಂಚ್‌ಗೆ ಬರಲೇಬೇಕು ಅಂತ ಕೇಳಿಕೊಂಡಿದ್ದೆ. ಮೊದಲು ಸಿನಿಮಾ ಲಾಂಚ್ ಮಾಡಿ ಬರುತ್ತೇನೆ ಅಂದಿದ್ದರು.

ಈ ಬಗ್ಗೆ ರಚಿತಾ ಅವರು ಕೂಡ ಈ ಮೊಲದಲೇ ಅವರ ಜತೆ ಮಾತನಾಡಿದ್ದರು. ನಿಮಗಾಗಿ ಹಾಗೂ ರಚಿತಾ ಇದ್ದಾರೆ ಖಂಡಿತ ಬರುತ್ತೇನೆ ಅಂದಿದ್ದರು ಹಾಗೂ ಗೆಳೆಯ ಡಾಲಿ ಕೂಡ ಇದ್ದಾರೆ. ಮ್ಯಾಟ್ನಿಗೆ ದೊಡ್ಡ ಶಕ್ತಿ ಸಿಕ್ಕಿದೆ, ದೊಡ್ಡ ಮಟ್ಟದಲ್ಲಿ ರೀಚ್ ಆಗಿದೆ ಎಂದರು.

ಮ್ಯಾಟ್ನಿ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಡಾಲಿ ಧನಂಜಯ್ ಭಾಗಿಯಾಗಿದ್ದರು. ಸಿನಿಮಾದಲ್ಲಿ ರಚಿತಾ ಡೆವಿಲ್ ಲುಕ್ ನೋಡಿ ಡಾಲಿ ಹಾಗೂ ದರ್ಶನ್ ಫಿದಾ ಆದರು.

ರಚಿತಾ ಮಾತನಾಡಿ, ‘ನನ್ನ ಸಿನಿಮಾದ ಟ್ರೈಲರ್ ಅನ್ನು ಮೊದಲ ಬಾರಿಗೆ ದರ್ಶನ್ ಸರ್ ಲಾಂಚ್ ಮಾಡುತ್ತಿದ್ದಾರೆ. ಇದು ತುಂಬಾ ಖುಷಿ ಹಾಗೂ ತುಂಬಾ ಹೆಮ್ಮೆಯಾಗುತ್ತಿದೆ. ನಾನು ತೂಗುದೀಪ ಬ್ಯಾನರ್‌ನಿಂದ ಲಾಂಚ್ ಆದವಳು. ಹತ್ತು ವರ್ಷದ ಬಳಿಕ ನನ್ನ ಸಿನಿಮಾದ ಟ್ರೈಲರ್ ಲಾಂಚ್‌ಗೆ ಬಂದಿದ್ದು ತುಂಬಾ ಖುಷಿಯಾಗುತ್ತಿದೆ ಎಂದರು.

ಇನ್ನು ವೇದಿಕೆ ಮೇಲೆ ಇರುವ ಡಾಲಿ, ಸತೀಶ್, ದರ್ಶನ್ ಸರ್ ಈ ಮೂವರು ಕಲಾವಿದರ ಜತೆ ನಾನು ಕೆಲಸ ಮಾಡಿದ್ದೇನೆ. ತುಂಬಾ ಖುಷಿಯಾಗುತ್ತೆ. ಮ್ಯಾಟ್ನಿ ಸಿನಿಮಾ ನೋಡಿ ಎಂದು ಅಭಿಮಾನಗಳಲ್ಲಿ ಕೇಳಿಕೊಂಡರು.

ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ಮ್ಯಾಟ್ನಿ ಸಿನಿಮಾ ಏಪ್ರಿಲ್‌ 5ರಂದು ಎಲ್ಲ ಚಿತ್ರಮಂದಿರಗಳಲ್ಲಿ ಬರುತ್ತಿದೆ. ಮ್ಯಾಟ್ನಿ ಸಿನಿಮಾ ಎಂದ ಮಾತ್ರಕ್ಕೆ ಮ್ಯಾಟ್ನಿ ಟೈಮಲ್ಲಿ ಹೋಗ್ಬೇಡಿ, ಮಾರ್ನಿಂಗ್ ಶೋಗೆ ಹೋಗಿ’ ಎಂದರು.

ಇನ್ನು ಸತೀಶ್ ಅವರ ಬಗ್ಗೆ ಮಾತನಾಡಿದ ದರ್ಶನ್, ‘ನೀನಾಸಂನಿಂದ ಬಂದು ಸಿನಿಮಾ ರಂಗದಲ್ಲಿ ಎಲ್ಲ ರೀತಿಯ ಪಾತ್ರಗಳನ್ನು ಮಾಡಿ ಈ ಮಟ್ಟಕ್ಕೆ ಬಂದು ನಿಂತ್ತಿದ್ದಾರೆ. ಈ ಜರ್ನಿ ತುಂಬಾ ದೊಡ್ಡದು. ಇನ್ನು ನಾಯಕಿಯಾಗಿ ಹತ್ತು ವರ್ಷಗಳು ಸಿನಿಮಾರಂಗದಲ್ಲಿ ಇದ್ದು ಜಹಿಸುವುದು ಅಂದ್ರೆ ಸುಮ್ಮನೆ ಅಲ್ಲ. ಶ್ರಮ ಕಾಣುತ್ತಿದೆ’ ಎಂದು ರಚಿತಾ ಅವರ ಬಗ್ಗೆಯೂ ಹೇಳಿ ಖುಷಿ ಹಂಚಿಕೊಂಡರು.

Leave a Reply

error: Content is protected !!
LATEST
ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ