NEWSನಮ್ಮಜಿಲ್ಲೆ

SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆ.ಗ್ರಾ.: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ತಾಕೀತು ಮಾಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪ.ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಡಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡುವ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಹಾಗೂ ನಿಗಮದ ವಿವಿಧ ಯೋಜನೆಗಳ ಕುರಿತ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದರು.

ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ. ಜಾತಿ ಮತ್ತು ಪ.ಪಂಗಡ ನಿಗಮದಿಂದ ಹಲವು ಯೋಜನೆಗಳು ಜಾರಿಯಾಗಿದ್ದು ಭೂ ಒಡೆತನ ಯೋಜನೆ, ನಿವೇಶನ ಹಾಗೂ ಮನೆ ಸೌಲಭ್ಯ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ.

ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ ಕಾರ್ಯಕ್ರಮಗಳಿದ್ದು ಇವುಗಳ ಬಗ್ಗೆ ಅಲೆಮಾರಿ ಸಮುದಾಯದ ಜನರಿಗೆ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ವಹಿಸಬೇಕು ಎಂದರು.

2023 ರಿಂದ 24ನೇ ಸಾಲಿನ ವರೆಗೆ ನಿಗಮದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ಧ ಫಲಾನುಭವಿಗಳ ಆಯ್ಕೆಯನ್ನು ಲಾಟರಿ ಮೂಲಕ (ರ‍್ಯಾಂಡಮ್) ಸಮಿತಿ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಜಿ, ನಾರಾಯಣ, ರತ್ನಮ್ಮ, ಎಂ.ರವಿ, ಹನುಮಂತರಾಜು, ವೆಂಕಟೇಶ್, ನಾಲ್ಕು ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ತುಷಾರ್ ಗಿರಿನಾಥ್ ನಲ್‌ಜಲ್ ಮಿತ್ರ ತರಬೇತಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅನುರಾಧ ಚಾಲನೆ ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ