CrimeNEWSದೇಶ-ವಿದೇಶ

ಶಾಲಾ ಬಸ್​ ಮರಕ್ಕೆ ಡಿಕ್ಕಿ: 6 ಮಕ್ಕಳು ಸಾವು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ನರ್ನಾಲ್: ಶಾಲಾ ಬಸ್​ವೊಂದು ಮರಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ 6 ಮಕ್ಕಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಕ್ಕಳು ಗಂಭಿರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ನರ್ನಾಲ್​ನ ಉನ್ಹಾನಿ ಗ್ರಾಮದ ಬಳಿ ನಡೆದಿದೆ.

ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ರಂಜಾನ್​ಗೆ ಶಾಲೆ ರಜೆ ಕೊಡದೇ ಕೆಲಸ ಮಾಡುತ್ತಿರುವುದು ಕೂಡ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ನಗರದ ಜಿಎಲ್ ಪಬ್ಲಿಕ್ ಸ್ಕೂಲ್​ಗೆ ಸೇರಿದ ಬಸ್ ಡ್ರೈವರ್​ ಮದ್ಯಪಾನ ಮಾಡಿ ಬಸ್​ ಚಾಲನೆ ಮಾಡಿಕೊಂಡು ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬಸ್​ ನೆಲಕ್ಕೆ ಉರುಳಿ ಬಿದ್ದಿದ್ದು, 6 ಮಕ್ಕಳು ಅಸುನೀಗಿದ್ದಾರೆ.

ಇನ್ನು 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು ಆ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣೆಗೆ ಬಂದಿದ್ದರಿಂದ ಕೆಲವು ಮಕ್ಕಳ ಪ್ರಾಣ ಉಳಿಸಿದೆ. ಇತ್ತ ಮಾಹಿತಿ ತಿಳಿದು ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಚಾಲಕ ಮದ್ಯಪಾನ ಮಾಡಿದ್ದರಿಂದ ಈ ದೊಡ್ಡ ಅವಘಡ ಸಂಭವಿಸಿದೆ. ಅತಿ ವೇಗವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಮಕ್ಕಳು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಪ್ರಮುಖವಾಗಿ ಬಸ್ಸಿನ ದಾಖಲೆಗಳು ಮುಗಿದು ಹೋಗಿ 6 ವರ್ಷಗಳಾಗಿದ್ದರು ಆ ಬಸ್‌ಅನ್ನು ಹಾಗೆಯೇ ಚಾಲನೆ ಮಾಡುತ್ತಿದ್ದರು ಎಂದು ಪೊಲೀಸ್​ ತನಿಖೆಯಿಂದ ತಿಳಿದು ಬಂದಿದ್ದು ಶಾಲಾ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಕ್ಕೆ ಪೊಲೀಸರು ಮುಂದಾಗಿದ್ದಾರೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು