CrimeNEWSನಮ್ಮರಾಜ್ಯ

ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ : ಪಾತಕಿಗೆ ಕ್ಷಮೆ ಇರಬಾರದು – ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಳವಳ್ಳಿಯಲ್ಲಿ ಟ್ಯೂಶನ್‌ಗೆ ಹೋದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ