NEWSನಮ್ಮರಾಜ್ಯಶಿಕ್ಷಣ-

ಶಾಲೆ ಆರಂಭಿಸುವ ಕುರಿತು ಶೀಘ್ರ ನಿರ್ಧಾರ: ಸಚಿವ ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಶೀಘ್ರದಲ್ಲಿ ಚರ್ಚೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿವಿಧ ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜೊತೆ ಶಾಲಾ ಮಂಡಳಿಗಳು, ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೋಮವಾರ ಚರ್ಚಿಸಿದ ಅವರು, ‘ಕೋವಿಡ್ ನಿಯಮಗಳನ್ನು ಪಾಲಿಸಿ ಎಸ್ಸೆಸ್ಸೆಲ್ಸಿ ಮತ್ತು12ನೇ ತರಗತಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಶೀಘ್ರದಲ್ಲೇ ವಿವಿಧ ಇಲಾಖೆಗಳ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.

ಶಾಲಾಡಳಿತ ಮಂಡಳಿಗಳು ಶಿಕ್ಷಣ ಕಾಯ್ದೆಯಡಿ ತಮ್ಮ ಶಾಲೆಗಳಲ್ಲಿ ಪೋಷಕರ ಪ್ರತಿನಿಧಿಗಳನ್ನೊಳಗೊಂಡ ಶಾಲಾ ಸಲಹಾ ಸಮಿತಿಗಳನ್ನು ರಚಿಸಿಕೊಂಡು ಸೌಹಾರ್ದದ ವಾತಾವರಣದಲ್ಲಿ ಚರ್ಚಿಸಿ, ಪರಸ್ಪರ ಹೊಂದಾಣಿಕೆ ಸೂತ್ರದೊಂದಿಗೆ ಬಂದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರಲು ಸುಲಭವಾಗುತ್ತದೆ ಎಂದೂ ಸಚಿವರು ಹೇಳಿದರು.

ಕೋವಿಡ್ ಕಾರಣ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡದಿರುವ, ಸಾಧ್ಯವಾದಷ್ಟು ಶುಲ್ಕ ಇಳಿಸುವಂಥ ಮತ್ತು ಶುಲ್ಕ ಪಾವತಿಸಲು ಕಂತು ನೀಡಲು ಮುಂದಾಗಬೇಕು. ಶಾಲಾ ಶುಲ್ಕ ನಿಗದಿ ವಿಚಾರದಲ್ಲಿ ಪೋಷಕರೊಂದಿಗೆ ಚರ್ಚಿಸಿ ಶಾಲಾ ಸಂಘಟನೆಗಳು ಶೀರ್ಘ ನಿರ್ಧಾರಕ್ಕೆ ಬಂದರೆ, ಸರ್ಕಾರ ಈ ಬಗ್ಗೆ ತೀರ್ಮಾನಿಸಲು ಅನುಕೂಲವಾಗಲಿದೆ’ ಎಂದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?