NEWSನಮ್ಮಜಿಲ್ಲೆ

ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ (ಎಸ್ಸಿಎಸ್‌ಪಿ, ಟಿಎಸ್ಪಿ ಯೋಜನೆ) ಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಇದೇ ತಿಂಗಳ ಅಂದರೆ ಫೆಬ್ರವರಿ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಆದೇಶ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಸ್ಸಿ, ಪಿ-ಟಿಎಸ್ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದಿಂದ ಎಸ್ಸಿಎಸ್‌ಪಿ, ಟಿಎಸ್ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವು ಸರಿಯಾಗಿ, ಸಮರ್ಪಕವಾಗಿ ಬಳಕೆಯಾಗಬೇಕು. ಕೆಲವು ಇಲಾಖೆಗಳು ಈಗಾಗಲೇ ಶೇ.100 ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳು ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ನೀಡಬೇಕು ಎಂದರು.

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವಶ್ಯಕತೆ ಇರುವವರಿಗೆ ಸೌಲಭ್ಯ ಕಲ್ಪಿಸಿ. ಪ.ಜಾತಿ, ಪ.ಪಂಗಡಗಳು ವಾಸಿಸುವ ಗ್ರಾಮಗಳಲ್ಲಿ ಹದಗೆಟ್ಟ ರಸ್ತೆಗಳನ್ನು ಗುರುತಿಸಿ ರಸ್ತೆಗಳನ್ನು ನಿರ್ಮಿಸಿ. ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಈಗಿನ ಆರ್ಥಿಕ ಸ್ಥಿತಿಗತಿ, ಅನುದಾನ ಸದ್ಬಳಕೆ ಆಗಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಿ ವರದಿ ನೀಡಿ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ