ಬೆಂಗಳೂರು: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು (ಏ.9) ಪ್ರಕಟಗೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ವಿದ್ಯಾರ್ಥಿಗಳು ಪಿಯುಸಿ ರಿಸಲ್ಟ್ ನೋಡಬಹುದಾಗಿದೆ. https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆಪ್, SMS ಮೂಲಕವೂ ಫಲಿತಾಂಶವನ್ನು ರವಾನಿಸಲಾಗಿದೆ.
ಇನ್ನು ಈ 2025-26ನೇ ಸಾಲಿನ ಪಿಯುಸಿ ಫಲಿತಾಂಶ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಶೇಕಡಾ 12.50ಯಷ್ಟು ದಾಖಲೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಶೇಕಡಾ 84ರಷ್ಟು ಫಲಿತಾಂಶ ದಾಖಲಾಗಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ: ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ ಪಡೆದಿವೆ. ಈ ಬಾರಿಯೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮುಂಚೂಣಿಯಲ್ಲಿ ಇದ್ದು, ಅತ್ಯಧಿಕ ಪಾಸ್ ಪ್ರಮಾಣ ದಾಖಲಿಸಿದೆ. ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಉತ್ತಮ ಸಾಧನೆ ತೋರಿವೆ.
ಈ ಬಾರಿ ದಾಖಲೆಯ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಪಾಸ್ ಪ್ರಮಾಣ ಸುಮಾರು 84% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸೈನ್ಸ್ ವಿಭಾಗದಲ್ಲಿ ಅತ್ಯಧಿಕ ಪಾಸ್ ಪ್ರಮಾಣ 90%ಕ್ಕಿಂತ ಹೆಚ್ಚುಾಗಿದೆ. ಕಾಮರ್ಸ್ ವಿಭಾಗದಲ್ಲಿ ಸರಾಸರಿ 80% ಪಾಸ್ ಪ್ರಮಾಣ ಆಗಿದ್ದು, ಆರ್ಟ್ಸ್ ವಿಭಾಗದಲ್ಲಿ 75% ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗದಲ್ಲಿ 9 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. ಒಂದೇ ಕಾಲೇಜಿನ 9 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ರಾಜಾಜಿನಗರದ ASC ಕಾಲೇಜಿನ 9 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ಇನ್ನು ಆನ್‌ಲೈನ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ 7.10,363 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಭಾಗದಲ್ಲಿ 292 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 142 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
Related










