
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏ.24 ರಿಂದ ಮೇ 8ರವರೆಗೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಕರೆದುಕೊಂಡು ಹೋಗಬೇಕು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 24.04.2005 ರಿಂದ 08.05.2025 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ 02 ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವರ ಕಾಲೇಜು ಹೊರತಾಗಿ ಇತರೆ ಕಾಲೇಜಿನ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಬೇಕು ಎಂದು ಕೋರಲಾಗಿದೆ.
ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮೇ 8ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳ ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಬೇಕು. ಅಲ್ಲದೆ ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ ನಿಲುಗಡೆಯನ್ನು ನೀಡಲು ಚಾಲನಾ ನಿಬ್ಬಂದಿಗಳಿಗೆ ತಿಳಿಸಬೇಕು. ಇನ್ನು ಚಾಲನಾ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುಕ್ತವಾಗಿ ವರ್ತಿಸಬೇಕು.
ಈ ಅಂಶಗಳ ಬಗ್ಗೆ ಎಲ್ಲ ಚಾಲನಾ ಸಿಬ್ಬಂಬಗಳಿಗೆ ಸೂಕ್ತ ಮಾಹಿತಿ ಒದಗಿಸಲು ಮತ್ತು ಘಟಕಗಳ/ಎಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಘಟಕ ವ್ಯವಸ್ಥಾಪಕರು ನೋಡಿಕೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ನೀಡಿದ್ದಾರೆ.
