NEWSನಮ್ಮರಾಜ್ಯಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಮುಕ್ತಾಯ: ಏ.7ರಂದು ಫಲಿತಾಂಶ ಪ್ರಕಟ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ. ಫಲಿತಾಂಶ ಬಿಡುಗಡೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಫಲಿತಾಂಶದ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಾರಿ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ-1 ಬರೆದಿದ್ದು, ಮಾರ್ಚ್ 22 ರಿಂದ ಮೌಲ್ಯಮಾಪನ ಕಾರ್ಯ ಶುರುವಾಗಿತ್ತು. ಪರೀಕ್ಷಾ ಮಂಡಳಿ ಈಗಾಗಲೇ ತಿಳಿಸಿದ್ದ ಸಂಭಾವ್ಯ ದಿನಾಂಕದಂತೆ ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ -1 ಮುಕ್ತಾಯವಾಗಿದ್ದು ಏಪ್ರಿಲ್ 5ರಿಂದ 20ರವರೆಗೆ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇದೆ.

ಈ ಬಾರಿ ಎಂಟು ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಕೀ ಉತ್ತರ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಏಪ್ರಿಲ್ 5ರೊಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಎಂಡಿ ಅಧ್ಯಕ್ಷತೇಲಿ ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಸಂಜೆ ಸಭೆ ಲಾಲ್‌ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿದ ಇಪಿಎಸ್ ಪಿಂಚಿಣಿದಾರರ 99ನೇ ಮಾಸಿಕ ಸಭೆ- ಕೇಂದ್ರದ ಬಗ್ಗೆ ಅಸಮಾಧಾನ ಆರ್‌.ಆರ್‌.ಇನ್‌ಫ್ರಾಸ್ಟ್ರಕ್ಚರ್‌ ಕಂಪನಿಯ ಮುಖ್ಯ ಕಾನೂನು ಸಲಹೆಗಾರ ವಕೀಲ H.B.ಶಿವರಾಜು ತಮಿಳುನಾಡಿಗೆ ವರ್ಗಾವಣೆ NWKRTC -ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರು ಪ್ರಯಾಣಿಕರು ಮೃತ, 20 ಮಂದಿಗೆ ಗಾಯ KSRTC: ಪ್ರಣಾಳಿಕೆ ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾದ ಸಾರಿಗೆ ನೌಕರರಿಂದ ನಾಳೆ ಸುದ್ದಿಗೋಷ್ಠಿ KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಸರ್ಕಾರಿ ಬಸ್‌ ಪ್ರಯಾಣಕ್ಕೆ ಶಿಫಾರಸು NWKRTC ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಬೆಂಗಾವಲು ವಾಹ‌ನ ಡಿಕ್ಕಿ ಎಲ್ಲ ಕಚೇರಿಗಳು, ನಿಗಮಗಳಲ್ಲೂ ಲೋಕಾ ಯುಕ್ತರ ಸಹಾಯವಾಣಿ ಸಂಖ್ಯೆ ಒಳಗೊಂಡ ಪ್ರದರ್ಶನ ಫಲಕ ಅಳವಡಿಸಲು ಸಿಎಸ್‌ ಡಾ. ಶಾಲಿನಿ... KSRTC ಕೂಟದಿಂದ ಏ.8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ