NEWSನಮ್ಮರಾಜ್ಯಶಿಕ್ಷಣ-

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ಶೇ.81.15 ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕೊನೇ ಸ್ಥಾನದಲ್ಲಿ ಗದಗ ಜಿಲ್ಲೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ ಶೇ.81.15 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಕೂಡ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ವರ್ಷ ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ಇಂದು ಸುದ್ದಿಗೋಷ್ಠಿ ನಡೆಸಿದ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಫಲಿತಾಂಶ ಪ್ರಕಟಿಸಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್‌ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಅದರಂತೆ ಈ ಬಾರಿ ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

ಜಯನಗರದ ಎನ್‌ಎಂಕೆಆರ್‌ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೇಧಾ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆಯುವ ಮೂಲಕ ಕರ್ನಾಟಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ನೂತನ 600ಕ್ಕೆ 595 ಅಂಕ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ತುಮಕೂರಿನ ವಿದ್ಯಾನಿಧಿ ಪಿಯು ಕಾಲೇಜಿನ ಜ್ಞಾನವಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6 ಲಕ್ಷ 98 ಸಾವಿರ 378 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇದ್ದು, ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆದಿದ್ದರು. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌  https://karresults.nic.in/ ಭೇಟಿ ನೀಡಿ ಫಲಿತಾಂಶವನ್ನು ಬೆಳಗ್ಗೆ 11 ಗಂಟೆ ಬಳಿಕ ವೀಕ್ಷಿಸಬಹುದು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ