ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಏ.8ರ ಮಧ್ಯಾಹ್ನ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಕಳೆದ ಮಾರ್ಚ್ 1ರಿಂದ ಮಾ.20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಯಿತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ.
ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಈ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಗೊಂಡ ಬಳಿಕ ಫಲಿತಾಂಶವನ್ನು https://karresults.nic.in ಜಾಲ ತಾಣದಲ್ಲಿ ಮಧ್ಯಾಹ್ನ 1.30ರ ನಂತರ ವೀಕ್ಷಿಸಬಹುದಾಗಿದೆ ಎಂದು ಮಂಡಲಿ ತಿಳಿಸಿದೆ.
KSEAB 2nd PUC ಫಲಿತಾಂಶ 2025 ಅನ್ನು ಡೌನ್ಲೋಡ್ ಮಾಡುವುದು ಹೇಗೆ?: 2025 ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
KSEAB 2nd PUC ಫಲಿತಾಂಶ 2025 ಅನ್ನು ಪರಿಶೀಲಿಸಲು ಕೆಲವು ಸರಳ ಹಂತಗಳನ್ನು ಇಲ್ಲಿ ನಿಮಗಾಗಿ ಕೊಡಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕರ್ನಾಟಕ ಮಂಡಳಿಯ 2nd PUC ಫಲಿತಾಂಶ 2025 ಅನ್ನು ಪರಿಶೀಲಿಸಲು ಕೆಳಗೆ ನೀಡಲಾದ ಹಂತಗಳನ್ನು ಅನುಸರಿಸಬಹುದು.

ಹಂತ 1: ಕರ್ನಾಟಕ ಫಲಿತಾಂಶಗಳ ಅಧಿಕೃತ ಪೋರ್ಟಲ್ https://karresults.nic.in ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಪಿಯು II ಪರೀಕ್ಷೆ 1 ಫಲಿತಾಂಶ ಪುಟಕ್ಕೆ ಹೋಗಿ.
ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ.
ಹಂತ 4: ಕರ್ನಾಟಕ ಮಂಡಳಿಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ನಿಮ್ಮ ಪರದೆಯ ಮೇಲೆ ಕಾಣಿಸುತ್ತದೆ.
ಹಂತ 5: KSEAB 2nd PUC ಫಲಿತಾಂಶ 2025 ಅನ್ನು ಡೌನ್ಲೋಡ್ ಮಾಡಿ.
ಹಂತ 6: ಭವಿಷ್ಯದ ಉಲ್ಲೇಖಕ್ಕಾಗಿ KSEAB 2nd PUC ಫಲಿತಾಂಶ 2025ರ ಮುದ್ರಣವನ್ನು ತೆಗೆದುಕೊಳ್ಳಿ.
Related


You Might Also Like
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...