NEWSಶಿಕ್ಷಣ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಏ.8ರ ಮಧ್ಯಾಹ್ನ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ಕಳೆದ ಮಾರ್ಚ್ 1ರಿಂದ ಮಾ.20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಯಿತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ.

ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಈ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಗೊಂಡ ಬಳಿಕ ಫಲಿತಾಂಶವನ್ನು https://karresults.nic.in ಜಾಲ ತಾಣದಲ್ಲಿ ಮಧ್ಯಾಹ್ನ 1.30ರ ನಂತರ ವೀಕ್ಷಿಸಬಹುದಾಗಿದೆ ಎಂದು ಮಂಡಲಿ ತಿಳಿಸಿದೆ.

KSEAB 2nd PUC ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡುವುದು ಹೇಗೆ?: 2025 ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಯಶಸ್ವಿಯಾಗಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

KSEAB 2nd PUC ಫಲಿತಾಂಶ 2025 ಅನ್ನು ಪರಿಶೀಲಿಸಲು ಕೆಲವು ಸರಳ ಹಂತಗಳನ್ನು ಇಲ್ಲಿ ನಿಮಗಾಗಿ ಕೊಡಲಾಗಿದೆ.  ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕರ್ನಾಟಕ ಮಂಡಳಿಯ 2nd PUC ಫಲಿತಾಂಶ 2025 ಅನ್ನು ಪರಿಶೀಲಿಸಲು ಕೆಳಗೆ ನೀಡಲಾದ ಹಂತಗಳನ್ನು ಅನುಸರಿಸಬಹುದು.

ಹಂತ 1: ಕರ್ನಾಟಕ ಫಲಿತಾಂಶಗಳ ಅಧಿಕೃತ ಪೋರ್ಟಲ್  https://karresults.nic.in ಗೆ ಭೇಟಿ ನೀಡಿ.

ಹಂತ 2: ಮುಖಪುಟದಲ್ಲಿ ಪಿಯು II ಪರೀಕ್ಷೆ 1 ಫಲಿತಾಂಶ ಪುಟಕ್ಕೆ ಹೋಗಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ.

ಹಂತ 4: ಕರ್ನಾಟಕ ಮಂಡಳಿಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ನಿಮ್ಮ ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: KSEAB 2nd PUC ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿ.

ಹಂತ 6: ಭವಿಷ್ಯದ ಉಲ್ಲೇಖಕ್ಕಾಗಿ KSEAB 2nd PUC ಫಲಿತಾಂಶ 2025ರ ಮುದ್ರಣವನ್ನು ತೆಗೆದುಕೊಳ್ಳಿ.

Deva
the authorDeva

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ