NEWSಶಿಕ್ಷಣ-

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ : ಮೊದಲ ದಿನವೇ ಇಬ್ಬರು ವಿದ್ಯಾರ್ಥಿಗಳು ಡಿಬಾರ್‌, 23,771 ವಿದ್ಯಾರ್ಥಿಗಳು ಗೈರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಇಂದು (ಮಾ.9) ಆರಂಭವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಡಿಬಾರ್‌ ಆಗಿದ್ದು ಬಿಟ್ಟರೆ ರಾಜ್ಯಾದ್ಯಂತ ಸುಸೂತ್ರವಾಗಿ ಪರೀಕ್ಷೆ ನಡೆದಿದೆ.

ಗುರುವಾರವಾದ ಇಂದು ಕನ್ನಡ ಮತ್ತು ಅರೇಬಿಕ್‌ ಭಾಷೆಯ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,33,797 ವಿದ್ಯಾರ್ಥಿಗಳ ಪೈಕಿ 5,10,026 (ಶೇ.95.55) ವಿದ್ಯಾರ್ಥಿಗಳು ಹಾಜರಾಗಿದ್ದರು. ಉಳಿದ 23,771 ವಿದ್ಯಾರ್ಥಿಗಳು ಗೈರಾಗಿದ್ದರು.

ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ 2nd ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುಲಾಬಿ ಹೂ ನೀಡಿ ಶುಭಕೋರಿದರು.

ಇನ್ನು ರಾಜ್ಯದ ಬೆಳಗಾವಿ ಜಿಲ್ಲೆಯ ಬಿಕ್ಕೋಡಿ ಮತ್ತು ಯಾದಗಿರಿಯಲ್ಲಿ ಪರೀಕ್ಷೆ ನಕಲು ಮಾಡುತ್ತಿದ್ದ ವೇಳೆ (ಕಾಪಿ ಹೊಡೆಯುತ್ತಿದ್ದ) ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಲಾಗಿದೆ ಎಂದು ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಇದನ್ನು ಹೊರತು ಪಡಿಸಿದರೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನೆರವೇರಿದೆ.

ಇನ್ನು ಶಿಕ್ಷಣ ಸಚಿವರ ತವರು ಕ್ಷೇತ್ರ ತಿಪಟೂರಿನಲ್ಲಿ ಪರೀಕ್ಷಾ ಕೊಠಡಿಗಳ ವೀಕ್ಷಿಸಿದ ಸಚಿವ ಬಿ.ಸಿ.ನಾಗೇಶ್‌ ಅವರು ಪರೀಕ್ಷೆಗೆ ಹಾಜರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭಕೋರಿದರು.

ಬೆಂಗಳೂರಿನ ಮಲ್ಲೇಶ್ವರದ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿನಿಯೊಬ್ಬರು ಹಿಜಾಬ್‌ ಧರಿಸಿ ಬಂದಿದ್ದು, ಅದನ್ನು ಕಾಲೇಜು ಪ್ರಾಂಶುಪಾಲರು ನಿರಾಕರಿಸಿದರು. ಆದರೂ ಆಕೆ ಹಿಜಾಬ್‌ ತೆಗೆಯದೆ ಪರೀಕ್ಷೆ ಆರಂಭವಾಗುವವರೆಗೂ ಕಾದು ನಿಂತಿದ್ದಳು, ಆದರೆ, ಹಿಜಾಬ್‌ ಬಗ್ಗೆ ಪ್ರಾಂಶುಪಾಲರು ತಿಳಿಸಿದ ಬಳಿಕ ಆಕೆ ಹಿಜಾಬ್‌ ತೆಗೆದು ಪರೀಕ್ಷೆಗೆ ಹಾಜರಾದಳು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...