NEWSಮೈಸೂರುಸಿನಿಪಥ

ಮೈಸೂರು ದಸರಾ ಚಲನ ಚಿತ್ರೋತ್ಸವಕ್ಕೆ ಕಿರುಚಿತ್ರಗಳ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಚಲನಚಿತ್ರೋತ್ಸವ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಪ್ರವಾಸೋದ್ಯಮ ಇಲಾಖೆಯ ಕೆಎಸ್‌ಟಿಡಿ ಹಾಲ್‌ನಲ್ಲಿ ಕಿರು ಚಿತ್ರ ಸ್ಪರ್ಧೆಗೆ ಬಂದಂತಹ 65 ಕಿರು ಚಿತ್ರಗಳನ್ನು ಚಲನಚಿತ್ರ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರು ಉತ್ತಮ ಕಿರು ಚಿತ್ರಗಳ ಆಯ್ಕೆ ಸಂಬಂಧ ವೀಕ್ಷಿಸಿದರು.

ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ ಸೇರಿದಂತೆ ಹಲವು ವಿಶೇಷತೆಗಳನ್ನು ನೀಡಲು ಚಲನ ಚಿತ್ರೋತ್ಸವ ಉಪ ಸಮಿತಿ ಸಿದ್ಧತೆ ನಡೆಸಿದ್ದು ತೀರ್ಪುಗಾರರಿಂದ ಆಯ್ಕೆಯಾದ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಹತ್ತು ಕಿರು ಚಿತ್ರಗಳನ್ನು ಐನಾಕ್ಸ್ ನಲ್ಲಿ ಪ್ರದರ್ಶನ ಮಾಡಲಾಗುವುದು.

ಸ್ಪರ್ಧೆಗೆ ಬಂದಂತಹ ಕಿರುಚಿತ್ರಗಳ ಆಯ್ಕೆ ಸಂಬಂಧ ತೀರ್ಪುಗಾರರಾಗಿ ಕಾವಾದ ಶಿಲ್ಪ ಕಲಾ ವಿಭಾಗದ ಉಪನ್ಯಾಸಕ ವೀರಣ್ಣ ಮಾ ಅರ್ಕಸಾಲಿ, ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಹೇಮಚಂದ್ರ, ರಂಗಭೂಮಿ ಕಲಾವಿದ ಮೈಮ್ ರಮೇಶ್, ಪತ್ರಕರ್ತ ಗುರುರಾಜ ಕೂಡ್ಲಿಗಿ ಹಾಗೂ ಸಿನಿಮಾ ರಂಗದ ಛಾಯಾಗ್ರಾಹಕ ನಿರೀಕ್ಷಿತ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವ ಉಪ ವಿಶೇಷಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ, ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಕೆಐಡಿಬಿ ಭೂ ಸ್ವಾಧೀನಾಧಿಕಾರಿ ಪ್ರಿಯಾ ದರ್ಶಿನಿ, ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಉಪ ನಿರ್ದೇಶಕ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹರೀಶ್.ಟಿ.ಕೆ. ಹಾಗೂ ಶ್ರೇಯಸ್ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ