NEWSಕ್ರೀಡೆ

ಸೆ. 14, 15 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡೆಯ ಆಯ್ಕೆಗಳನ್ನು ಸೆಪ್ಟೆಂಬರ್ 14 ಮತ್ತು 15 ರಂದು ದೊಡ್ಡಬಳ್ಳಾಪುರ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ನಿಯಮ ಮತ್ತು ನಿಬಂಧನೆಗಳು : • ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ ಆಗಿರಬೇಕು. •ಈಗಾಗಲೇ ನಡೆದಿರುವ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಫಲಿತಾಂಶ ಪಟ್ಟಿಯಂತೆ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಗಳಲ್ಲಿ(ರಿಲೇ ಸಹಿತ ) ಪ್ರಥಮ ಸ್ಥಾನ ಪಡೆದವರು ಭಾಗವಹಿಸಬಹುದು ಜಿಲ್ಲಾ ಮಟ್ಟದಲ್ಲಿನ ಆಯ್ಕೆ ಕ್ರೀಡೆಗಳಿಗೆ ನೇರವಾಗಿ ಭಾಗವಹಿಸಬಹುದು. (ಟೆನ್ನಿಸ್, ನೆಟ್ ಬಾಲ್ ಮತ್ತು ಈಜು).

• ಕ್ರೀಡಾಪಟುಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಒರಿಜಿನಲ್ ಮತ್ತು ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ತರುವುದು ಮತ್ತು ವಿದ್ಯಾರ್ಥಿಗಳಾಗಿದ್ದರೆ ಆಧಾರ್ ಮತ್ತು ಶಾಲೆ/ಕಾಲೇಜು ಗುರುತಿಸಿ ಚೀಟಿ ತರುವುದು.

•ಕಡ್ಡಾಯವಾಗಿ ಕ್ರೀಡಾಪಟುಗಳು ಬೆಳಗ್ಗೆ 9 ಗಂಟೆಗೆ ಕ್ರೀಡಾಂಗಣದಲ್ಲಿ ಹಾಜರಿದ್ದು ನೋಂದಣಿ ಮಾಡಿಕೊಳ್ಳುವುದು. ನಂತರ ಬಂದಂತಹ ಕ್ರೀಡಾಪಟುಗಳಿಗೆ ಅವಕಾಶವಿಲ್ಲ. •ತೀರ್ಪುಗಾರರ ತೀರ್ಪಿಗೆ ಬದ್ಧರಾಗಿರಬೇಕು. ಅಸಭ್ಯವಾಗಿ ವರ್ತಿಸಿದವರನ್ನು ಕ್ರೀಡಾಕೂಟದಿಂದ ರದ್ದು ಗೊಳಿಸಲಾಗುವುದು.

•ವಿವಾದತ್ಮಕ ವಿಷಯ ಮತ್ತು ವಿಶೇಷ ಪ್ರಕರಣ / ಸಂದರ್ಭದಲ್ಲಿ ಆಯೋಜಕರ(ಬೆ. ಗ್ರಾ.ಜಿಲ್ಲಾ ಕ್ರೀಡಾ ಇಲಾಖೆಯ ) ತೀರ್ಮಾನ ಅಂತಿಮ. ಹೆಚ್ಚಿನ ಮಾಹಿತಿಗಾಗಿ, ಮೊಬೈಲ್: 9632778567 /9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಆರ್.ಗೀತಾ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...