NEWSನಮ್ಮರಾಜ್ಯ

ತಾನು ನಿರುದ್ಯೋಗಿಯೆಂದು ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯುವನಿಧಿ ಯೋಜನೆ ಫಲಾನುಭವಿಗಳು ಸೇವಾ ಸಿಂಧುವಿನ ಮೂಲಕ ನೋಂದಣಿ ಮಾಡಿಕೊಂಡು ಪ್ರತಿ ತಿಂಗಳ ಕೊನೆಯ ವಾರದೊಳಗೆ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮಾಡುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.

ಕರ್ನಾಟಕ ರಾಜ್ಯದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾಗಳಲ್ಲಿ ತೇರ್ಗಡೆಯಾಗಿರುವುವರು ಈ ಘೋಷಣೆ ಮಾಡಿಕೊಳ್ಳಬೇಕು.

ಈಗಾಗಲೇ ಅಕ್ಟೋಬರ್ ವರೆಗೆ ನೇರ ನಗದು ಖಾತೆಗೆ ಜಮೆಯಾಗಿದ್ದು, ಮುಂದಿನ ತಿಂಗಳು ಈ ಪ್ರಯೋಜನ ಪಡೆಯಲು ಎಸ್.ಎಂ.ಎಸ್ ಸಂದೇಶವನ್ನು ಫಲಾನುಭವಿಗಳಿಗೆ ರವಾನಿಸಲಾಗುತ್ತದೆ.

ಫಲಾನುಭವಿಗಳು ಕಡ್ಡಾಯವಾಗಿ ಆಧಾರ್ ಸೀಡ್ ಆಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು https://sevasindhugs.karnataka.gov.in ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬಹುದು.

2022-23 ಹಾಗೂ 2025-26ನೇ ಸಾಲಿನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾಗಳಲ್ಲಿ ಪ್ರಸ್ತಕ ಸಾಲಿನಲ್ಲಿ ತೇರ್ಗಡೆಯಾಗಿ, 180 ದಿನ ಪೂರೈಸಿದ ಬಳಿಕ ಅಭ್ಯರ್ಥಿಗಳಿಗೆ ಹಣ ಸಂದಾಯವಾಗುತ್ತದೆ.

ಹೀಗಾಗಿ ಇದರ ಪ್ರಯೋಜನವನ್ನು ಪಡೆಯಲು ನವೆಂಬರ್ 29 ರವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಲು ಅವಕಾಶವಿದೆ.

ಈಗಾಗಲೇ ಪ್ರಯೋಜನ ಪಡೆಯುತ್ತಿರುವ ಫಲಾನುಭವಿಗಳು ಸಹ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಇಲ್ಲವಾದಲ್ಲಿ ಅಂತಹವರಿಗೆ ನೇರ ನಗದು ವರ್ಗಾವಣೆ ಆಗುವುದಿಲ್ಲ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ  ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ...