ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿದ್ದಾರೆ.
ವಿಷಯ ತಿಳಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ನಟಿ ಲೀಲಾವತಿ ಅಮ್ಮ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಸವಳಿದಿದ್ದಾರೆ.
ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಲೀಲಾವತಿ ಅಮ್ಮ. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ಕುಮಾರ್ ಅವರ ಬಳಿ ಅಮ್ಮನ ಆರೋಗ್ಯದ ಕುರಿತು ಭಾಮ ಹರೀಶ್ ವಿಚಾರಿಸಿದ್ದಾರೆ.