Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಸೆ.19ರಂದು ಸಾರಿಗೆ ನೌಕರರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಕೂಟದಿಂದ ಸುದ್ದಿಗೋಷ್ಠಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ಕಳೆದ 2020 ಡಿಸೆಂಬರ್‌ನಲ್ಲಿ ನಡೆಸಿದ ಧರಣಿ ವೇಳೆ ಸರ್ಕಾರವೇ ನೀಡಿರುವ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ನಾಳೆ (ಸೆ.19) ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸೋಮವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಸಾರಿಗೆ ಸಂಸ್ಥೆಯಲ್ಲಿ ನೋಂದಾಯಿಸಲ್ಪಟ್ಟಿರುವ ಹಲವು ಸಂಘಗಳು ಒಟ್ಟುಗೂಡಿ ಅತೀ ಶೀಘ್ರದಲ್ಲೇ ಹೊರಾಟದ ರೂಪುರೇಷೆ ಸಿದ್ಧಪಡಿಸಲು ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಯೋಜಿಸಲಾಗುವುದು ಎಂದು ವಿವರಿಸಿದ್ದಾರೆ.

ಕೂಟದ ವತಿಯಿಂದ ಡಿಸೆಂಬರ್-2020 ರಲ್ಲಿ ನಡೆದ ಸಾರಿಗೆ ಮುಷ್ಕರದ ಸಂದರ್ಭದಲ್ಲಿ ಸರ್ಕಾರ ನೀಡಿದ ಲಿಖಿತ ಭರವಸೆಗಳನ್ನು ಈಡೇರಿಸದ ಕಾರಣ 2021ರ ಏಪ್ರಿಲ್‌ 7 ರಿಂದ ನಡೆದ ಸಾರಿಗೆ ಮುಷ್ಕರದ ಸಮಯದಲ್ಲಿ ಮಾಡಲಾದ ವಜಾ, ವರ್ಗಾವಣೆ ಮತ್ತು ಅಮಾನತು ಪ್ರಕರಣ ಸೇರಿ ಎಲ್ಲ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಿಲ್ಲ.

ಈ ಕಾರಣ, ಇನ್ನು ಹಲವು ಸಮಸ್ಯೆಗಳು ಸಾರಿಗೆ ಸಂಸ್ಥೆಯಲ್ಲಿ ಉದ್ಭವವಾಗಿ ಸಾರಿಗೆ ನೌಕರರು ಕಷ್ಟ ಅನುಭವಿಸುತ್ತಿದ್ದಾರೆ. ಜತೆಗೆ ಖೀನ್ನತೆಗೆ ಜಾರುತ್ತಿರುವ ನೌಕರರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಸಂಸ್ಥೆಯ ಅಧಿಕಾರಿಗಳು ಮಾಡಬೇಕು ಎಂದು ಆಗ್ರಹಿಸಿಲಾಗುವುದು.

ಇನ್ನು ಸರ್ಕಾರ ನೀಡಿರುವ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ” ಹೆಸರಿನಡಿ ಹೋರಾಟಗಳನ್ನು ಹಮ್ಮಿಕೊಳ್ಳುವ ವಿಚಾರದ ಬಗ್ಗೆಯೂ ಪತ್ರಿಕಾಗೊಷ್ಠಿ ನಡೆಸಲು ನಿರ್ಧರಿಸಲಾಗಿದೆ ಎಂದು ಚಂದ್ರಶೇಖರ್‌ ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ