ಬೆಂಗಳೂರು ಗ್ರಾಮಾಂತರ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 20 ರಂದು ದೇವನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ಎನ್. ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರ ಉಪಸ್ಥಿತಿಯಲ್ಲಿ ದೇವನಹಳ್ಳಿ ಟೌನ್, ಅಂಬೇಡ್ಕರ್ ಭವನದಲ್ಲಿ ಸೆಪ್ಟೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ದೇವನಹಳ್ಳಿ ತಾಲೂಕಿನ ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು.
ಈ ವೇಳೆ ಕುಂದು ಕೊರತೆಗಳ ಅಹವಾಲುಗಳನ್ನು ಆಲಿಸುವುದಲ್ಲದೇ ಸ್ಥಳದಲ್ಲಿಯೇ ಪರಿಹಾರವನ್ನು ನೀಡಲು ಕ್ರಮ ವಹಿಸಲಾಗುವುದು. ಆದ್ದರಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲ ಸಾರ್ವಜನಿಕರು ತಮ್ಮ ಕುಂದು ಕೊರತೆಗಳು/ ಅಹವಾಲುಗಳು ಏನಾದರು ಇದ್ದಲ್ಲಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಾರ್ವಜನಿಕ ಸಂಪರ್ಕ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.