CrimeNEWSನಮ್ಮಜಿಲ್ಲೆ

BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಯಲಹಂಕ ಮೇಲ್ಸೇತುವೆ ಸಮೀಪ ಬಿಎಂಟಿಸಿ ಬಸ್‌, ಟ್ರಕ್‌ ಹಾಗೂ ಇನೋವಾ ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಬಿಎಂಟಿಸಿ ಬಸ್‌ ಚಾಲಕನ ಸ್ಥಿತಿ ಗಂಭೀರವಾಗಿದೆ.

ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಇನ್ನು ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಸಂಬಂಧಿಕರ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದಾರೆ.

ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ (Car) ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ಲಾರಿ ಚಾಲಕ ಹಾಗೂ ಕಾರಿನ ಚಾಲಕ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಭೀಕರ ಅಪಘಾತದಲ್ಲಿ ಬಸ್‍ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್‍ನಲ್ಲಿ ಏರ್‌ಪೋರ್ಟ್‌ಗೆ ಹೋಗುವ ಒಬ್ಬರೆ ಪ್ರಯಾಣಿಕರಿದ್ದಿದ್ದರಿಂದ ಹೆಚ್ಚಿನ ಅವಘಡ ಸಂಭವಿಸಿಲ್ಲ.

ಇನ್ನು ಬಿಎಂಟಿಸಿ ವೋಲ್ವೊ ಬಸ್ ಲಾರಿಗೆ ಗುದ್ದಿದ ರಭಸಕ್ಕೆ ಬಸ್‌ನ ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಫ್ಲೈಓವರ್​​ ಮೇಲೆ ಅಪಘಾತವಾಗಿ ನಿಂತಿರುವ ಇನೋವಾ ಕಾರು, ಸಿಮೆಂಟ್ ಲಾರಿ, ವೋಲ್ವೋ ಬಿಎಂಟಿಸಿ ಬಸ್‌ನ್ನು ಇದೀಗ ಕ್ರೇನ್ ಮೂಲಕ ತೆರವುಗೊಳಿಸಲಾಗುತ್ತಿದೆ.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...