Vijayapatha - ವಿಜಯಪಥ > NEWS > Crime > ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು – ಪ್ರಯಾಣಿಕರು ಸೇಫ್
ಗದಗ: ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ಎರ್ಟಿಗಾ ಕಾರು ಹಿಂದಿನಿಂದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ್ದು, ಅದರ ಹಿಂದೆ ಬರುತ್ತಿದ್ದ ಬೊಲೆರೋ ಪಿಕಪ್ ವಾಹನ ಎರ್ಟಿಗಾಗೆ ಗುದ್ದಿದೆ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ವಿಜಯಪುರ ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನ ಏರ್‌ಬ್ಯಾಗ್ ಓಪನ್ ಆಗಿದ್ದರಿಂದ ಚಾಲಕ ಮತ್ತು ಕಾರಿನಲ್ಲಿದ್ದ ಸ್ನೇಹಿತರು ಪ್ರಾಣಾಪಾಯಿಂದ ಪಾರಾಗಿದ್ದಾರೆ.
ಈ ಘಟನೆ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
Related
Deva
Leave a reply