CrimeNEWSನಮ್ಮರಾಜ್ಯ

ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ರಚನೆಯಾಗಿದ್ದು ಈಗ ಅದು ತನ್ನ ತನಿಖೆ ಆರಂಭಿಸಿದೆ.

ಸಂತ್ರಸ್ತರ ಮಹಿಳೆಯರಲ್ಲಿ ಒಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ಈಗಾಗಲೇ ದೂರು ನೀಡಿದ್ದು, ಈ ಬೆನ್ನಲ್ಲೇ ಪ್ರಕರಣ ಭುಗಿಲೆದ್ದಿದೆ. ಅಲ್ಲದೆ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪ್ರಕರಣ ಸಂಬಂಧ ಎಡಿಜಿಪಿ-ಸಿಐಡಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಹೆಚ್ಚುವರಿ ಕಮಿಷನರ್ ಸುಮನ್ ಡಿ.ಪೆನ್ನೇಕರ್ ಮತ್ತು ಮೈಸೂರು ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರನ್ನೊಳಗೊಂಡ ಎಸ್ಐಟಿ ತಂಡ ತನಿಖೆ ಆರಂಭಿಸಿದೆ.

ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಮಹಿಳೆಗೆ ಮುಜುಗರ), 506 (ಬೆದರಿಕೆ), 509 (ಮಹಿಳೆಯರ ಮರ್ಯಾದೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ರೇವಣ್ಣ ಅವರನ್ನು 1 ಮತ್ತು ಪ್ರಜ್ವಲ್ ರೇವಣ್ಣ ಅವರನ್ನು 2ನೇ ಆರೋಪಿಗಳನ್ನಾಗಿ ಮಾಡಲಾಗಿದೆ.

ಮನೆಯಲ್ಲಿ ಒಬ್ಬಳೇ ಇದ್ದಾಗ ರೇವಣ್ಣ ಮತ್ತು ಪ್ರಜ್ವಲ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದೂರು ನೀಡಿದ್ದಾರೆ. ಅಂದಾಜು 2,876 ಮಹಿಳೆಯರನ್ನು ಪ್ರಜ್ವಲ್ ಶೋಷಣೆ ಮಾಡಿದ್ದಾರೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದ್ದು, ಈ ಸಂಬಂಧ ತಮ್ಮ ವಾಟ್ಸಾಪ್ ಖಾತೆಯಲ್ಲಿ ದೂರನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಹಾಸನ ಜಿಲ್ಲೆಯ ಬೇಲೂರಿನ ನವೀನ್ ಗೌಡ ವಿರುದ್ಧ ಪ್ರಜ್ವಲ್ ಎಫ್‌ಐಆರ್ ದಾಖಲಿಸಿದ್ದಾರೆ, ಅಲ್ಲದೆ, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪವನ್ನು ತಳ್ಳಿಹಾಕಿದ್ದು, ಈ ವಿಡಿಯೋವನ್ನು ಸೃಷ್ಟಿಸಲಾಗಿದ್ದು, ಚುನಾವಣೆ ವೇಳೆ ನನ್ನ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿದ ಒಂದು ದಿನದ ನಂತರ ಪ್ಪಜ್ವಲ್ ಎಫ್‌ಐಆರ್ ದಾಖಲಿಸಿದ್ದಾರೆ. ಈ ನಡುವೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಆಯೋಗ ಸರ್ಕಾರವನ್ನು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ವರದಿಯನ್ನು ಶೀಘ್ರಗತಿಯಲ್ಲಿ ಸಲ್ಲಿಸುವಂತೆ ಸರ್ಕಾರ ಎಸ್‌ಐಟಿಗೆ ಸೂಚಿಸಿದೆ.

ಎಸ್‌ಐಟಿ ತನಿಖೆಗೆ ವಹಿಸಿದ್ದು ತೃಪ್ತಿ ತಂದಿದೆ: ಸರ್ಕಾರದ ಸೂಚನೆ ಬೆನ್ನಲ್ಲೇ ಎಸ್‌ಐಟಿ ಹಾಸನದ ಆರ್‌.ಸಿ. ರಸ್ತೆಯಲ್ಲಿರುವ ಎಂಪಿ ಕ್ವಾರ್ಟರ್ಸ್‌ನಲ್ಲಿ ತನಿಖೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ, ಸಂತ್ರಸ್ತ ಮಹಿಳೆಯರು ಮುಂದೆ ಬಂದರೆ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಸಾಧ್ಯತೆಗಳಿವೆ. ಎಸ್ಐಟಿ ತಂಡ ವಿಡಿಯೋಗಳಿರುವ ಪೆನ್ ಡ್ರೈವ್‌ಗಳನ್ನು ಸಂಗ್ರಹಿಸುತ್ತಿದ್ದು, ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನಿಸಲು ಮುಂದಾಗಿದೆ.

ಅಲ್ಲದೆ, ಪ್ರಕರಣದಲ್ಲಿ ಆರೋಪಿಗಳಾಗಿರುವ ಪ್ರಜ್ವಲ್ ಹಾಗೂ ರೇವಣ್ಣ ಅವರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಲುಕ್‌ಔಟ್ ನೋಟಿಸ್’ ಶೀಘ್ರದಲ್ಲೇ ಜಾರಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ 2ನೇ ಹಂತದ ಮತದಾನ ಮುಗಿದ ನಂತರ ಪ್ರಜ್ವಲ್ ಮತ್ತು ಅವರ ಸ್ನೇಹಿತರು ಶನಿವಾರ ಏಳು ದಿನಗಳ ಪ್ರವಾಸಕ್ಕೆಂದು ಜರ್ಮನ್‌ಗೆ ತೆರಳಿದ್ದಾರೆಂದು ವರದಿಗಳು ತಿಳಿಸಿವೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಇದೇ ಮೊದಲ ಬಾರಿಗೆ ಎಚ್.ಡಿ.ರೇವಣ್ಣ ವಿರುದ್ಧ ಅವರ ತವರಿನಲ್ಲೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ