CrimeNEWS

ರಾಸಲೀಲೆ ಸಿಡಿ ಪ್ರಕರಣ-ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ ನೀಡಲಿ: ಲಖನ್ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಮಾಜಾ ಸಚಿವ ರಮೇಶ್‌ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಪ್ರಕರಣದ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಸಹೋದರ ಹಾಗೂ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿಯವರು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಮನೆಯವರೇ ನೇರವಾಗಿ ಡಿಕೆಶಿ ಪಾತ್ರದ ಬಗ್ಗೆ ಹೇಳುತ್ತಿದ್ದಾರೆ. ತಂದೆ ತಾಯಿ ಆರೋಪ ಮಾಡುತ್ತಿದ್ದಾರೆ ಅಂದ್ರೆ ಅದು ನಿಜಾನೆ ಇರಬಹುದು. ಹಾಗಾಗಿ ಶಿವಕುಮಾರ್ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆರೋಪ ಕೇಳಿ ಬರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದಾರೆ. ಈಗ ಸಂತ್ರಸ್ತ ಮಹಿಳೆಯ ಪೋಷಕರು ನೇರವಾಗಿ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ. ಆರೋಪದ ಹಿನ್ನೆಲೆ ರಮೇಶ್ ಹೇಗೆ ರಾಜೀನಾಮೆ ನೀಡಿದರೋ ಡಿಕೆಶಿ ಕೂಡ ರಾಜೀನಾಮೆ ನೀಡಲಿ ಎಂದು ಹೇಳಿದರು.

ರಾಜ್ಯ ಜಲಸಂಪನ್ಮೂಲ ಸಚಿವರಾಗಿ ರಮೇಶ್ ಜಾರಕಿಹೊಳಿಯವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದರು. ಅವರ ವಿರುದ್ಧ ಇಂತಹ ಪಿತೂರಿ ನಡೆಸಿರುವುದು ದುರಾದೃಷ್ಟಕರ. ದುಶ್ಮನ್ ಕಹಾ ಹೈ ಅಂದ್ರೆ ಬಗಲ್‌ ಮೇ ಹೈ ಎಂಬಂತಾಗಿದೆ. ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂಬುದೇ ಇದೀಗ ಗೊಂದಲವಾಗಿ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ