CrimeNEWSನಮ್ಮರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇಲ್ಲ – ವಕೀಲ ಶಿವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ ಸಿಆರ್​ಸಿಪಿ (Code of Criminal Procedure) ಸೆಕ್ಷನ್ 164ರ ಅಡಿ ಸಂತ್ರಸ್ತ ಮಹಿಳೆ ಹೇಳಿಕೆ ನೀಡಿದ್ದಾರೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಸಂಬಂಧ CrPC ಸೆಕ್ಷನ್‌ 164ರ (Section 164) ಅಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ (Judge) ಮುಂದೆ ಸಂತ್ರಸ್ತೆ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ಹೇಳಿಕೆ ದಾಖಲು ಮಾಡಿದ ನಂತರ ಎಸ್‌ಐಟಿ ತಂಡ ಸಂತ್ರಸ್ತೆಯನ್ನು ಕರೆದುಕೊಂಡು ಹೋಗಿದೆ.

ಏನಿದು ಸಿಆರ್‌ಪಿಸಿ ಸೆಕ್ಷನ್‌ 164?: ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಮೊದಲು ಸಂತ್ರಸ್ತರ ಹೇಳಿಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ನಂತರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಂತ್ರಸ್ತರು ಜಡ್ಜ್‌ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡುತ್ತಾರೆ.

ಉದಾ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲೂ ಎಸ್‌ಐಟಿ ಸಂತ್ರಸ್ತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಆದರೆ ಅವರನ್ನು ಬಂಧಿಸಲಿಲ್ಲ. ಅದರಂತೆ ಈ ಪ್ರಕರಣವೂ ಕೂಡ.

ಪೊಲೀಸರ ಮುಂದೆ ಆರೋಪಿಗಳ ವಿರುದ್ಧ ಹೇಳಿಕೆ ನೀಡಿದರೂ ಕೆಲವೊಮ್ಮೆ ಕೋರ್ಟ್‌ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳ ಕಡೆಯಿದ ಬೆದರಿಕೆ ಅಥವಾ ಇನ್ಯಾವುದೋ ಒತ್ತಡಕ್ಕೆ ಮಣಿದು ಉಲ್ಟಾ ಹೇಳಿಕೆ ನೀಡುತ್ತಾರೆ. ಜಡ್ಜ್‌ ಮುಂದೆ ಉಲ್ಟಾ ಹೇಳಿಕೆ ನೀಡಿದರೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿ ಆರೋಪಿ ಶಿಕ್ಷೆಯಿಂದ ಪಾರಾಗುವ ಸಾಧ್ಯತೆ ಇರುತ್ತದೆ.

ಆದರೆ ಸಿಆರ್​ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಾದರೆ ಅದನ್ನು ನ್ಯಾಯಾಲಯಗಳು ಗಂಭೀರವಾಗಿ ಪರಿಗಣಿಸುತ್ತವೆ. ಈ ಹೇಳಿಕೆಗಳನ್ನು ಬದಲಿಸುವುದಾಗಲೀ, ಹಿಂಪಡೆಯಲು ಸಾಧ್ಯವಿಲ್ಲ. ಈ ಕಾರಣಕ್ಕೆ ಸಂತ್ರಸ್ತರ ಹೇಳಿಕೆ ಭಾರೀ ಮಹತ್ವ ಪಡೆಯುತ್ತದೆ. ದೂರುದಾರರು ಏನು ಹೇಳಿಕೆ ಕೊಟ್ಟಿದ್ದಾರೆ ಎನ್ನುವುದನ್ನು ಗೌಪ್ಯವಾಗಿ ಇಡಲಾಗುತ್ತದೆ. ಸೆಕ್ಷನ್‌ 164ರ ಅಡಿ ಹೇಳಿಕೆ ನೀಡಿದ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾದ ಉದಾಹರಣೆಗಳಿವೆ.

ಎಸ್‌ಐಟಿಗೆ ಆರೋಪಿಗಳ ಬಂಧಿಸುವ ಅಧಿಕಾರವಿಲ್ಲ: ಇನ್ನು ಎಸ್‌ಐಟಿ ತಂಡದ ಕಾರ್ಯಾಚರಣೆ ಬಗ್ಗೆ ವಿಜಯಪಥದೊಂದಿಗೆ ಮಾತನಾಡಿದ ಸುಪ್ರೀಂ ಮತ್ತು ಹೈಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು, ಯಾವುದೆ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ಕೈಗೆತ್ತಿಕೊಂಡರೆ ಆ ಪ್ರಕರಣ ಸಂಬಂಧ ವರದಿಯನ್ನು ಕಲೆಹಾಕಿ ಸರ್ಕಾರಕ್ಕೆ ಒಪ್ಪಿಸಬೇಕು. ಇದನ್ನು ಹೊರತುಪಡಿಸಿ ಆರೋಪಿಯನ್ನು ಬಂಧಿಸುವ ಅಧಿಕಾರ ಇಲ್ಲ ಎಂದು ತಿಳಿಸಿದರು.

ಇನ್ನು ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಆರೋಪ ಸಂಬಂಧ ನಡೆಯುತ್ತಿರುವ ವಿಚಾರಣೆಯಲ್ಲಿಯೂ ಎಲ್ಲ ದಾಖಲೆಗಳನ್ನು ಕಲೆಹಾಕಿ ಅಂದರೆ ಸಂತ್ರಸ್ತ ಮಹಿಳೆಯರ ಹೇಳಿಕೆ, ಆರೋಪಿಗಳ ಹೇಳಿಕೆಯನ್ನು ಸಂಗ್ರಹಿಸಿ ಆ ಎಲ್ಲ ವರದಿಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಅದನ್ನು ಬಿಟ್ಟು ಎಸ್‌ಐಟಿಗೆ ಬೇರೆ ಅಧಿಕಾರವನ್ನು ಸರ್ಕಾರ ನೀಡಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಇರುವ ಐಪಿಸಿ ಸಕ್ಷನ್‌ 354A ಮತ್ತು 354D ಅಂದ್ರೆ ಈ ಸಕ್ಷನ್‌ಗಳು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಅಂದರೆ ಹಿಡಿದು ಎಳೆದಾಡುವುದು ಹಲ್ಲೆ ಮಾಡುವುದು ಸೇರಿದಂತೆ ಇತರ ಸಕ್ಷನ್‌ಗಳಾಗಿವೆ ಹೀಗಾಗಿ ಆರೋಪಿ ನ್ಯಾಯಾಲಯಕ್ಕೆ ನೇರವಾಗಿ ಹಾಜರಾಗದೆ ಕೋರ್ಟ್‌ನಲ್ಲಿ ವಕೀಲರ ಮೂಲಕವೇ ನಿರೀಕ್ಷಣಾ ಜಾಮೀನು (Anticipatory bail) ಪಡೆದುಕೊಳವ್ಳುವುದಕ್ಕೆ ಹೆಚ್ಚಿನ ಅವಕಾಶವಿದೆ ಎಂದು ತಿಳಿಸಿದರು.

ಟ್ರಾನ್ಸಿಟ್  ಬೇಲ್‌ ಕೂಡ ಪಡೆದುಕೊಳ್ಳಬಹುದು:  ಇನ್ನು ಟ್ರಾನ್ಸಿಟ್ ಬೇಲ್‌ ಕೂಡ ಪಡೆದುಕೊಳ್ಳುವುದಕ್ಕೆ ಕಾನೂನಿನಲ್ಲಿ ಅವಕಾಶವಿದ್ದು, ಈ ಬೇಲ್‌ ಮುಕ್ತಾಯದ  ಅವಧಿ 30 ದಿನಗಳವರೆಗೂ ಇರುತ್ತದೆ. ಈ ಬೇಲ್‌ಅನ್ನು ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಯಲ್ಲಿ ವಾಸವಿರುವ ವಿಳಾಸವನ್ನು ನೀಡಿ ಪಡೆದುಕೊಳ್ಳುವುದಕ್ಕೆ ಅವಕಾಶವಿದೆ.

ಅಂದರೆ ಶಾಸಕ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಈಗ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಅವರು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಈ ಟ್ರಾನ್ಸಿಸ್‌ ಬೇಲ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ.  ಒಂದು  ವೇಳೆ ಈ ಟ್ರಾನ್ಸಿಟ್ ಬೇಲ್‌  ಸಿಕ್ಕರೆ 30 ದಿನಗಳವರೆಗೂ ಬಂಧಿಸುವುದಕ್ಕೆ ಅವಕಾಶವಿರುವುದಿಲ್ಲ ಎಂದು ವಕೀಲ ಶಿವರಾಜು ತಿಳಿಸಿದ್ದಾರೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?